ADVERTISEMENT

ಸಿಇಟಿ: ರಾಜ್ಯದಿಂದ ಮೇಲ್ಮನವಿ

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2022, 19:44 IST
Last Updated 13 ಸೆಪ್ಟೆಂಬರ್ 2022, 19:44 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ‘ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ, 2020-21ನೇ ಸಾಲಿನಲ್ಲಿ ದ್ವಿತೀಯ ಪಿಯು ತೇರ್ಗಡೆಯಾದ ವಿದ್ಯಾರ್ಥಿಗಳು ಗಳಿಸಿದ ಶೇ 50 ಹಾಗೂ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ (ಸಿಇಟಿ) ಪಡೆದ ಶೇ 50ರಷ್ಟು ಅಂಕಗಳನ್ನು ಪರಿಗಣಿಸಿ ರೀ–ಡೂ ಮಾಡಿ ಹೊಸ ರ‍್ಯಾಂಕ್ ಪಟ್ಟಿ ಪ್ರಕಟಿಸಬೇಕು’ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ನಿರ್ದೇಶಿಸಿದ್ದ ಹೈಕೋರ್ಟ್‌ ಏಕಸದಸ್ಯ ನ್ಯಾಯಪೀಠದ ತೀರ್ಪನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿದೆ.

‘ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ 2020-21ನೇ ಸಾಲಿನ ಪಿಯು ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಪರಿಗಣಿಸಲಾಗದು‘ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) 2022 ಜುಲೈ 30ರಂದು ಹೊರಡಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಎಸ್‌. ಆರ್‌. ಕೃಷ್ಣಕುಮಾರ್‌ಅವರಿದ್ದ ಏಕಸದಸ್ಯ ನ್ಯಾಯಪೀಠ ಇತ್ತೀಚೆಗೆ ರದ್ದುಗೊಳಿಸಿತ್ತು.

‘ಈ ತೀರ್ಪಿಗೆ ತಡೆ ನೀಡಬೇಕು‘ ಎಂದು ಮೇಲ್ಮನವಿಯಲ್ಲಿ ಕೋರಲಾಗಿದೆ. ಇದು ಇನ್ನಷ್ಟೇ ವಿಭಾಗೀಯ ಪೀಠದಲ್ಲಿ ವಿಚಾರಣೆಗೆ ನಿಗದಿಯಾಗಬೇಕಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.