ADVERTISEMENT

ಭಾರಿ ಮಳೆ ಸಾಧ್ಯತೆ: ಕರಾವಳಿ ಜಿಲ್ಲೆಗಳಿಗೆ ಶನಿವಾರ ‘ರೆಡ್ ಅಲರ್ಟ್’

​ಪ್ರಜಾವಾಣಿ ವಾರ್ತೆ
Published 5 ಜುಲೈ 2024, 16:01 IST
Last Updated 5 ಜುಲೈ 2024, 16:01 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಶನಿವಾರವೂ ಗುಡುಗು ಸಹಿತ ಭಾರಿ ಮಳೆ ಮುಂದುವರಿಯುವ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ಕರಾವಳಿಯ ಮೂರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಿಸಿದೆ. 

ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ‘ರೆಡ್ ಅಲರ್ಟ್’ ನೀಡಲಾಗಿದ್ದು, ಈ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಈ ಜಿಲ್ಲೆಗಳ ಕೆಲವೆಡೆ ಭಾರಿ ಮಳೆಯಾಗುವ ಸಂಭವವಿದೆ. ಭಾರಿ ಮಳೆಯ ಎಚ್ಚರಿಕೆ ನೀಡಲಾದ ಈ ಜಿಲ್ಲೆಗಳಲ್ಲಿ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿಯೂ ಬೀಸುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. 

ADVERTISEMENT

ದಕ್ಷಿಣ ಕರ್ನಾಟಕದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ,
ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಯ ಕೆಲವು ಸ್ಥಳಗಳಲ್ಲಿ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಸಹಿತ ಸಾಧಾರಣ ಮಳೆಯಾಗುವ ಸಂಭವವಿದೆ. ಉತ್ತರ ಕರ್ನಾಟಕದ ಕೆಲವು ಕಡೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಇದೇ 9ರವರೆಗೂ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರಿ ಮಳೆ ಮುಂದುವರಿಯುವ ಮುನ್ನೆಚ್ಚರಿಕೆ ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.