ADVERTISEMENT

ಕೆನಡಾ ಸಂಸತ್‌ಗೆ ಕನ್ನಡಿಗ ಚಂದ್ರ ಆರ್ಯ ಆಯ್ಕೆ; ಹುಟ್ಟೂರು ಶಿರಾದಲ್ಲಿ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2019, 1:24 IST
Last Updated 24 ಅಕ್ಟೋಬರ್ 2019, 1:24 IST
ಚಂದ್ರ ಆರ್ಯ
ಚಂದ್ರ ಆರ್ಯ   

ತುಮಕೂರು: ಜಿಲ್ಲೆಯ ಶಿರಾ ತಾಲ್ಲೂಕಿನ ದ್ವಾರಾಳು ಗ್ರಾಮದ ಚಂದ್ರ ಆರ್ಯ ಅವರು ಕೆನಡಾ ದೇಶದ ನೇಪಿಯನ್ ಕ್ಷೇತ್ರದಿಂದ ಎರಡನೇ ಬಾರಿಗೆ ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಅವರು ಲಿಬರಲ್ ಪಕ್ಷದಿಂದ ಸ್ಪರ್ಧಿಸಿದ್ದರು.

ಇದು ದ್ವಾರಾಳು ಗ್ರಾಮದಲ್ಲಿ ಸಂತೋಷಕ್ಕೆ ಕಾರಣವಾಗಿದೆ. ಕುಂಚಿಟಿಗ ಸಮುದಾಯದ ಚಂದ್ರಕಾಂತ್ ಅವರ ಸಾಧನೆಗೆ ಆ ಸಮುದಾಯದ ಸಂಭ್ರಮ ವ್ಯಕ್ತಪಡಿಸಿದೆ. ಸಮುದಾಯದ ಯುವಕರು ಸಾಮಾಜಿಕ ಜಾಲತಾಣಗಳಲ್ಲಿ ಅವರ ಸಾಧನೆಯ ಬಗ್ಗೆ ಬರಹ ಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಚಂದ್ರ ಆರ್ಯ ದ್ವಾರಾಳು ಗ್ರಾಮದ ಕೆ.ಗೋವಿಂದಯ್ಯ ಮತ್ತು ಜಯಮ್ಮ ದಂಪತಿ ಪುತ್ರ. ರಾಮನಗರ ಗೌಸಿಯಾ ಕಾಲೇಜಿನಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಪದವಿ ಪಡೆದ ಚಂದ್ರ ಆರ್ಯ ಧಾರವಾಡದಲ್ಲಿ ಎಂಬಿಎ ಶಿಕ್ಷಣ ಪೂರೈಸಿದರು.

ADVERTISEMENT

ಕರ್ನಾಟಕ ರಾಜ್ಯ ಹಣಕಾಸು ನಿಗಮದ (ಕೆಎಸ್‌ಎಫ್‌ಸಿ) ಉಪ ಪ್ರಧಾನ ವ್ಯವಸ್ಥಾಪಕರಾಗಿದ್ದರು. ಬಳಿಕ ಗ್ರಾನೈಟ್ ಉದ್ಯಮದತ್ತ ಆಸಕ್ತಿ ತೋರಿದರು. ದುಬೈನಲ್ಲಿದ್ದ ಅವರು ‌ನಂತರ ಕೆನಡಾಕ್ಕೆ ತೆರಳಿದರು. ಅಲ್ಲಿ ಕಲ್ಲಿದ್ದಲು ಉದ್ಯಮಿಯಾಗಿ ಗುರುತಿಸಿಕೊಂಡರು.2015ರಲ್ಲಿಯೂ ಅವರು ಆಯ್ಕೆಯಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.