ಬೆಂಗಳೂರು: ‘ದೇಶದ ಹೆಸರು ಬದಲಾವಣೆ ಮಾಡಿದರೆ ಏನು ಲಾಭ? ಜನರ ಜೀವನದಲ್ಲಿ ಬದಲಾವಣೆ ಆಗುವುದು ಮುಖ್ಯ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಸುದ್ದಿಗಾರರ ಜೊತೆ ಬುಧವಾರ ಮಾತನಾಡಿದ ಅವರು, ‘ಜನರ ಕಲ್ಯಾಣ ಮಾಡುವ ಹೊಸ ಕಾನೂನುಗಳನ್ನು ಕೇಂದ್ರ ಸರ್ಕಾರ ತರಬೇಕು. ನಮ್ಮ ಯುಪಿಎ ಸರ್ಕಾರ ಇದ್ದಾಗ ಮಾಹಿತಿ ಹಕ್ಕು, ಆರ್‌ಟಿಐ, ನರೇಗಾ, ಆಹಾರ ಭದ್ರತಾ ಕಾಯ್ದೆಗಳನ್ನು ಜಾರಿಗೆ ತಂದೆವು. ಇಂತಹ ಆಲೋಚನೆಗಳು ಬಿಜೆಪಿಯವರಿಗೆ ಬರುವುದಿಲ್ಲವೇ’ ಎಂದು ಪ್ರಶ್ನಿಸಿದರು.
‘ಶ್ರೀಮಂತರು, ದೊಡ್ಡ ಉದ್ಯಮಿಗಳು ದೇಶ ಬಿಟ್ಟು ಹೋಗುತ್ತಿದ್ದಾರೆ. 12 ಲಕ್ಷ ಪಾಸ್‌ಪೋರ್ಟ್‌ಗಳನ್ನು ಸರ್ಕಾರದ ವಶಕ್ಕೆ ನೀಡಿ ಈ ದೇಶದ ಕೋಟ್ಯಧಿಪತಿಗಳು ಬೇರೆ ದೇಶದ ಪೌರತ್ವ ತೆಗೆದುಕೊಂಡಿದ್ದಾರೆ. ನಮ್ಮ ದೇಶದ ಹಣ ಹೊರಗಡೆ ಹೋಗುತ್ತಿದೆ. ಹೆಸರು ಬದಲಾವಣೆಯಿಂದ ಏನೂ ಲಾಭವಿಲ್ಲ. ನಮ್ಮ ಆಚಾರ- ವಿಚಾರದಲ್ಲಿ ಬದಲಾವಣೆ ಆಗಬೇಕು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.