ಬೆಂಗಳೂರು: ಆದಿಲ್ ಎಂಬ ಯುವಕನನ್ನು ಪ್ರಕರಣವೊಂದರ ಸಂಬಂಧ ವಿಚಾರಣೆಗಾಗಿ ಚನ್ನಗಿರಿ ಠಾಣೆ ಪೊಲೀಸರು ಠಾಣೆಗೆ ಕರೆತಂದ ಏಳು ನಿಮಿಷದೊಳಗೆ ಆ ಯುವಕ ಮೃತಪಟ್ಟಿದ್ದಾನೆ. ಸಾವಿನ ನಿಖರ ಕಾರಣ ಮರಣೋತ್ತರ ಪರೀಕ್ಷೆ ಬಳಿಕ ತಿಳಿಯಲಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.
ಸುದ್ದಿಗಾರರ ಜತೆ ಶನಿವಾರ ಮಾತನಾಡಿದ ಅವರು, ʼಮೃತನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆ ಬಗ್ಗೆ ವಿಚಾರಣೆ ನಡೆಸಲು ಆತನನ್ನು ಪೊಲೀಸರು ಠಾಣೆಗೆ ಕರೆತಂದಿದ್ದರು. ಅಲ್ಲಿ ಮೃತಪಟ್ಟಿರುವುದರಿಂದ ಪೊಲೀಸರೇ ಸಾವಿಗೆ ಕಾರಣ ಎಂದು ಆರೋಪಿಸಿ ಆತನ ಕುಟುಂಬದವರು ಪ್ರತಿಭಟನೆ ನಡೆಸಿ, ದಾಂಧಲೆ ಮಾಡಿದ್ದಾರೆʼ ಎಂದರು.
ʼಪೊಲೀಸ್ ಠಾಣೆ ಮೇಲೆ ದಾಳಿ ಮಾಡುವವರು, ಹಲ್ಲೆ ನಡೆಸುವವರು, ತಲೆ ಕತ್ತರಿಸುತ್ತೇವೆ ಎನ್ನುವವರನ್ನು ಸುಮ್ಮನೆ ಬಿಡುವುದಿಲ್ಲ. ಧಮಕಿ ಹಾಕುವವರ ಬಗ್ಗೆ ಮೃದು ಧೋರಣೆ ತಳೆಯುವ ಪ್ರಶ್ನೆ ಇಲ್ಲ. ಪೊಲೀಸರು ಕಾನೂನಿನ ಪ್ರಕಾರ ಕ್ರಮ ಜರುಗಿಸುತ್ತಾರೆʼ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.