ADVERTISEMENT

ಚನ್ನಪಟ್ಟಣ ಉಪಚುನಾವಣೆ: ಬೆಂಗಳೂರಿನಲ್ಲಿ ಇಂದು ಸಮನ್ವಯ ಸಭೆ– ನಿಖಿಲ್ ಕುಮಾರಸ್ವಾಮಿ

ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2024, 7:25 IST
Last Updated 19 ಅಕ್ಟೋಬರ್ 2024, 7:25 IST
ನಿಖಿಲ್ ಕುಮಾರಸ್ವಾಮಿ
ನಿಖಿಲ್ ಕುಮಾರಸ್ವಾಮಿ   

ಹುಬ್ಬಳ್ಳಿ: ಅಧಿಕಾರ ಸಿಗಬೇಕು ಎಂಬ ಹಪಾಹಪಿಯಿಂದ ಕೆಲಸ ಮಾಡುತ್ತಿಲ್ಲ. ಪಕ್ಷ ಸಂಘಟನೆಯ ಜವಾಬ್ದಾರಿಯನ್ನು ನನಗೆ ನೀಡಿದ್ದು, ಅದನ್ನು ಮಾಡುತ್ತಿದ್ದೇನೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಯಲ್ಲಿ ಸಿ.ಪಿ.ಯೋಗೇಶ್ವರ್, ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಯಾರು ಅಭ್ಯರ್ಥಿಯಾಗಬೇಕು ಎಂಬ ಬಗ್ಗೆ ಎರಡೂ ಪಕ್ಷಗಳ ಮುಖಂಡು ಚರ್ಚಿಸಿ ತೀರ್ಮಾನ ಕೈಗೊಳ್ಳಲಿದ್ದಾರೆ. ಈ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಇಂದು ಸಂಜೆ ಸಮನ್ವಯ ಸಭೆ ನಡೆಯಲಿದೆ ಎಂದರು.

ಬಿಜೆಪಿ ಜತೆ ಸೇರಿ ಲೋಕಸಭಾ ಚುನಾವಣೆ ಎದುರಿಸುವ ತೀರ್ಮಾನವನ್ನು ಎಚ್.ಡಿ.ದೇವೇಗೌಡ ಅವರು ಕೈಗೊಂಡರು. ಇದರಿಂದ ಉತ್ತಮ ಫಲಿತಾಂಶ ಸಿಕ್ಕಿತು. ಚನ್ನಪಟ್ಟಣದಲ್ಲಿ ಎನ್.ಡಿ.ಎ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ ಎಂದು ಹೇಳಿದರು.

ADVERTISEMENT

ರಾಜ್ಯದಲ್ಲಿ ಪಕ್ಷ ಸಂಘಟನೆ ದೃಷ್ಟಿಯಿಂದ ಈಗಾಗಲೇ ಏಳು ಜಿಲ್ಲೆಗಳಲ್ಲಿ ಪ್ರವಾಸ ಮಾಡಿದ್ದೇನೆ. ರಾಜ್ಯದಲ್ಲಿ ನಡೆಯುವ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಹೊಂದಾಣಿಕೆಯಿಂದ ಕೆಲಸ ಮಾಡುವ ನಿಟ್ಟಿನಲ್ಲಿ ಶಿಗ್ಗಾವಿ, ಸಂಡೂರಿಗೆ ಭೇಟಿ ನೀಡಿ ಕಾರ್ಯಕರ್ತರು, ಮುಖಂಡರೊಂದಿಗೆ ಚರ್ಚಿಸುತ್ತೇನೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.