ADVERTISEMENT

ಕಾಂಗ್ರೆಸ್ ಸೇರಿದ ಯೋಗೇಶ್ವರ್; ಮರಳಿ ಗೂಡಿಗೆ ಬಂದಿದ್ದಾರೆ ಎಂದ ಡಿ.ಕೆ. ಶಿವಕುಮಾರ್

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2024, 6:31 IST
Last Updated 23 ಅಕ್ಟೋಬರ್ 2024, 6:31 IST
<div class="paragraphs"><p>ಸಿ.ಪಿ. ಯೋಗೇಶ್ವರ್ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್</p></div>

ಸಿ.ಪಿ. ಯೋಗೇಶ್ವರ್ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

   

ಬೆಂಗಳೂರು: 'ಸಿ.ಪಿ. ಯೋಗೇಶ್ವರ್ ಅವರು ಇದೀಗ ಮರಳಿ ಗೂಡಿಗೆ ಬಂದಿದ್ದಾರೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ ಯೋಗೇಶ್ವರ್ ಅವರ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಶಿವಕುಮಾರ್, 'ನಮ್ಮ ಜಿಲ್ಲೆಯ ಪ್ರಮುಖ ನಾಯಕರಾದ ಯೋಗೇಶ್ವರ್ ಜೊತೆ ಅನೇಕ ವಿಚಾರಗಳನ್ನು ಚರ್ಚಿಸಿದೆವು. ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದೇನೆ. ವರಿಷ್ಠರ ಅನುಮತಿ ಪಡೆದು ಯೋಗೇಶ್ವರ್ ಕಾಂಗ್ರೆಸ್‌ಗೆ ಸೇರ್ಪಡೆ ಮಾಡಿಕೊಳ್ಳಲಾಗಿದೆ' ಎಂದರು.

ADVERTISEMENT

'ವರಿಷ್ಠರ ಅನುಮತಿ ಪಡೆದು ಯೋಗೇಶ್ವರ್ ಅವರನ್ನು ಪಕ್ಷಕ್ಕೆ ಕರೆದುಕೊಂಡು ಬಂದಿದ್ದೇವೆ. ಅವರು ಯಾವುದೇ ಷರತ್ತು ಹಾಕಿಲ್ಲ.‌ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ಅವರು ಸಹಿ ಹಾಕಿದ್ದಾರೆ. ನಮ್ಮ ಪಕ್ಷದ ಎಲ್ಲ ಮುಖಂಡರ ಸಮ್ಮುಖದಲ್ಲಿ ಸೇರ್ಪಡೆ ಆಗುತ್ತಿದ್ದಾರೆ' ಎಂದರು.

'ಮುಖ್ಯಮಂತ್ರಿ ಸಿದ್ದರಾಮಯ್ಯ ವಯನಾಡ್‌ಗೆ ಹೋಗಿದ್ದಾರೆ. ನಾನು ಕೂಡ ಅಲ್ಲಿಗೆ ಹೋಗಬೇಕಾಗಿತ್ತು. ಆದರೆ, ಪಕ್ಷ ಸೇರ್ಪಡೆ ಕಾರಣ ಇಲ್ಲೇ ಉಳಿದೆ.‌ ಯೋಗೇಶ್ವರ್ ರಾಜಕಾರಣ ಮಾಡಿದ್ದು ಕಾಂಗ್ರೆಸ್‌ನಿಂದಲೇ.‌ ಬೇರೆ ಬೇರೆ ಚಿನ್ಹೆಯಡಿ‌ ಕೆಲಸ ಮಾಡಿ ಮತ್ತೆ ಕಾಂಗ್ರೆಸ್‌ಗೆ ಬಂದಿದ್ದಾರೆ' ಎಂದರು.

ಸಚಿವ ಕೃಷ್ಣ ಬೈರೇಗೌಡ, ಜಮೀರ್ ಅಹಮ್ಮದ್ ಖಾನ್, ಎನ್. ಚಲುವರಾಯಸ್ವಾಮಿ, ಡಿ.ಕೆ ಸುರೇಶ್, ಎಂ.ಸಿ ಸುಧಾಕರ್, ಶಾಸಕ ಉದಯ್ ಕದಲೂರು ಸೇರಿದಂತೆ ಹಲವರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.