ಬೆಂಗಳೂರು: ಯಾರ ಬಗೆಗಾದರೂ ಭಿನ್ನಾಭಿಪ್ರಾಯ ಇದ್ದರೆ, ಅದನ್ನು ಬಲವಾದಅಭಿಪ್ರಾಯಗಳೊಂದಿಗೆ ವಿರೋಧಿಸಬೇಕೇ ವಿನಃ ದೈಹಿಕ ಕಾರ್ಯದಿಂದಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸಿದ್ದರಾಮಯ್ಯನವರ ಕೊಡಗು ಪ್ರವಾಸದ ವೇಳೆ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಬಗ್ಗೆ, ಟ್ವೀಟ್ ಮಾಡಿರುವ ಬೊಮ್ಮಾಯಿ, ಹೀಗೆ ಹೇಳಿದ್ದಾರೆ.
‘ಸಿದ್ದರಾಮಯ್ಯನವರು, ವಿರೋಧ ಪಕ್ಷದ ನಾಯಕರಾಗಿದ್ದು, ಆ ಸ್ಥಾನಕ್ಕೆತನ್ನದೇ ಆದ ಗೌರವ ಇದೆ. ಗೌರವಿಸುವುದನ್ನು ಎಲ್ಲರೂ ಪಾಲಿಸಬೇಕು’ ಎಂದು ತಮ್ಮ ಪಕ್ಷದ ಕಾರ್ಯಕರ್ತರಿಗೆ ಸೂಚಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.