ADVERTISEMENT

ಶ್ರೀಶೈಲದಲ್ಲಿ ಕನ್ನಡಿಗರ ಮೇಲೆ ಹಲ್ಲೆ: ಆಂಧ್ರ ಸಿಎಂ ಜತೆ ಮಾತುಕತೆ- ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2022, 9:49 IST
Last Updated 31 ಮಾರ್ಚ್ 2022, 9:49 IST
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ   

ಬೆಂಗಳೂರು: ಆಂಧ್ರದ ಶ್ರೀಶೈಲದಲ್ಲಿ ಕನ್ನಡಿಗರ ಮೇಲೆ ನಡೆದ ಹಲ್ಲೆಯ ಬಗ್ಗೆ ಆಂಧ್ರದ ಅಧಿಕಾರಿಗಳ ಜತೆ ಮಾತನಾಡಿ ಮಾಹಿತಿ ಪಡೆದಿದ್ದು, ಅಲ್ಲಿನಮುಖ್ಯಮಂತ್ರಿ ಜತೆ ಈ ಕುರಿತು ಮಾತನಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ರಾಜ್ಯದಿಂದ ಹೋದ ಭಕ್ತರು ಮತ್ತು ಸ್ಥಳೀಯರ ಮಧ್ಯೆ ಸಣ್ಣ ಕಾರಣಕ್ಕೆ ಆರಂಭವಾದ ಗಲಾಟೆಯಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆ. ಗಲಾಟೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯಕ್ಕೆ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅವರು ಹೇಳಿದರು.

ಶ್ರೀಶೈಲಕ್ಕೆ ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ,ತೆಲಂಗಾಣ ಸೇರಿದಂತೆ ಹಲವು ಕಡೆಗಳಿಂದ ಭಕ್ತರು ಬರುತ್ತಾರೆ. ಈ ರೀತಿಯ ಘಟನೆ ಮರುಕಳಿಸದಂತೆ ಎಚ್ಚರವಹಿಸಬೇಕು. ಈ ಬಗ್ಗೆ ಅಲ್ಲಿನ ಮುಖ್ಯಮಂತ್ರಿ ಜಗನ್‌ಮೋಹನ ರೆಡ್ಡಿ ಜತೆ ಮಾತನಾಡುತ್ತೇನೆ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.