ADVERTISEMENT

ಮುಡಾ ಪ್ರಕರಣ: ಲೋಕಾಯುಕ್ತ ವಿಚಾರಣೆಗೆ ಸಿದ್ದರಾಮಯ್ಯ ಹಾಜರು

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2024, 4:52 IST
Last Updated 6 ನವೆಂಬರ್ 2024, 4:52 IST
<div class="paragraphs"><p>ಸಿದ್ದರಾಮಯ್ಯ</p></div>

ಸಿದ್ದರಾಮಯ್ಯ

   

ಮೈಸೂರು: ಮುಡಾ ನಿವೇಶನ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಇಲ್ಲಿನ ಲೋಕಾಯುಕ್ತ ಎಸ್.ಪಿ. ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.

ಬೆಳಿಗ್ಗೆ 10.10ಕ್ಕೆ ಅವರು ವಿಚಾರಣೆಗೆ ಬಂದಿದ್ದು, ಲೋಕಾಯುಕ್ತ ಎಸ್.ಪಿ. ಟಿ.ಜೆ. ಉದೇಶ್ ನೇತೃತ್ವದ ತಂಡವು ಅವರನ್ನು ವಿಚಾರಣೆಗೆ ಒಳಪಡಿಸುತ್ತಿದೆ.

ADVERTISEMENT

ಮುಡಾದಿಂದ 50:50 ಅನುಪಾತದಲ್ಲಿ ಸಿದ್ದರಾಮಯ್ಯ ಪತ್ನಿ ಬಿ.ಎಂ. ಪಾರ್ವತಿ ಅವರು 14 ಬದಲಿ ನಿವೇಶನ ಪಡೆದ ಪ್ರಕರಣದಲ್ಲಿ ಲೋಕಾಯುಕ್ತ ಅಧಿಕಾರಿಗಳು ನ್ಯಾಯಾಲಯದ ನಿರ್ದೇಶನದಂತೆ ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಸಿದ್ದರಾಮಯ್ಯ ಈ ಪ್ರಕರಣದಲ್ಲಿ ಮೊದಲ ಆರೋಪಿ ಆಗಿದ್ದು, ಅಧಿಕಾರಿಗಳ ಮೇಲೆ ಪ್ರಭಾವ ಬೀರಿ ಪತ್ನಿಗೆ ನಿವೇಶನ ಕೊಡಿಸಿದ ಆರೋಪ ಅವರ ಮೇಲಿದೆ.

ಪ್ರಕರಣದ ಇತರ ಆರೋಪಿಗಳಾದ ಬಿ.ಎಂ. ಪಾರ್ವತಿ, ಮಲ್ಲಿಕಾರ್ಜುನ ಸ್ವಾಮಿ ಹಾಗೂ ದೇವರಾಜು ಅವರ ವಿಚಾರಣೆಯು ಈಗಾಗಲೇ ಪೂರ್ಣಗೊಂಡಿದೆ.

ಬಿಗಿ ಬಂದೋಬಸ್ತ್
ವಿಚಾರಣೆ ಕಾರಣಕ್ಕೆ ಲೋಕಾಯುಕ್ತ ಕಚೇರಿ ಸುತ್ತಮುತ್ತ ಪೊಲೀಸರು ಬಂದೋಬಸ್ತ್ ಕಲ್ಪಿಸಿದ್ದು, ಅಕ್ಕಪಕ್ಕದ ರಸ್ತೆಗಳಲ್ಲಿ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಮಾಧ್ಯಮದವರನ್ನೂ ಲೋಕಾಯುಕ್ತ ಕಚೇರಿಯ ಬಳಿಗೆ ಬಿಟ್ಟಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.