ADVERTISEMENT

ಅಕ್ಕ ತಂಗಿಯರ ಹಾರೈಕೆಯಷ್ಟೇ ನನಗೆ ಸಾಕು: ಶಕ್ತಿ ಯೋಜನೆ ಬಗ್ಗೆ ಸಿದ್ದರಾಮಯ್ಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 6 ಅಕ್ಟೋಬರ್ 2023, 13:01 IST
Last Updated 6 ಅಕ್ಟೋಬರ್ 2023, 13:01 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಂಗಳೂರು: ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆಯಿಂದಾಗಿ ರಾಜ್ಯದ ಧಾರ್ಮಿಕ ಕ್ಷೇತ್ರಗಳಲ್ಲಿ ಭಕ್ತರ ಸಂಖ್ಯೆ ಏರಿಕೆಯಾಗಿದ್ದರಿಂದ, ದೇವಸ್ಥಾನದ ಸುತ್ತಮುತ್ತಲಿರುವ ವ್ಯಾಪಾರಿಗಳ ಭಾಗ್ಯದ ಬಾಗಿಲು ತೆರೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ವ್ಯಾಪಾರ ಹೆಚ್ಚಳದ ಬಗ್ಗೆ ಧರ್ಮಸ್ಥಳದ ಸುತ್ತಮುತ್ತಲಿನ ವ್ಯಾಪಾರಿಗಳು ಸಂತಸ ವ್ಯಕ್ತಪಡಿಸಿರುವ ವಿಡಿಯೊವನ್ನು ತಮ್ಮ ‘ಎಕ್ಸ್‌’ ಖಾತೆಯಲ್ಲಿ ಹಂಚಿಕೊಂಡಿರುವ ಅವರು, ‘ಶಕ್ತಿ ಯೋಜನೆಯಡಿ ರಾಜ್ಯದ ಹೆಣ್ಣುಮಕ್ಕಳಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ನೀಡಿದ್ದರಿಂದ ನಾಡಿನ ಪುಣ್ಯ ಕ್ಷೇತ್ರಗಳಲ್ಲಿ ಮಹಿಳಾ ಭಕ್ತಾದಿಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ. ಭಕ್ತಾದಿಗಳಿಗೆ ದೇವರ ದರ್ಶನದ ಭಾಗ್ಯ ದೊರೆತರೆ, ಕೊರೊನಾದಿಂದ ಕಂಗೆಟ್ಟಿದ್ದ ಸ್ಥಳೀಯ ವ್ಯಾಪಾರಿಗಳ ಬದುಕಿನ ಭಾಗ್ಯದ ಬಾಗಿಲು ತೆರೆದಿದೆ’ ಎಂದು ಬರೆದುಕೊಂಡಿದ್ದಾರೆ.

ADVERTISEMENT

ಅ.4ರಂದು ಈ ಬಗ್ಗೆಯೇ ಟ್ವೀಟ್‌ ಮಾಡಿದ್ದ ಅವರು, ‘ಶಕ್ತಿ ಯೋಜನೆ ಜಾರಿ ನಂತರದಿಂದ ನಾಡಿನ ದೇವಾಲಯಗಳು ಭಕ್ತಾದಿಗಳಿಂದ ತುಂಬಿ ತುಳುಕುತ್ತಿವೆ. ದೇವರ ದರ್ಶನ ಪಡೆದ ಧನ್ಯತಾಭಾವ ಭಕ್ತಾದಿಗಳದ್ದಾದರೆ, ಭಕ್ತಾದಿಗಳನ್ನೇ ನಂಬಿದ್ದ ಸ್ಥಳೀಯ ವ್ಯಾಪಾರಿಗಳ ಬದುಕು ಹಸನಾಗಿದೆ’ ಎಂದು ಬರೆದುಕೊಂಡಿದ್ದರು.

ಅಲ್ಲದೆ, ಧರ್ಮಸ್ಥಳಕ್ಕೆ ಉಚಿತ ಬಸ್ ಪ್ರಯಾಣ ಕೈಗೊಂಡ ನನ್ನ ಅಕ್ಕತಂಗಿಯರ ಶುಭ ಹಾರೈಕೆಯಷ್ಟೇ ಸಾಕು ನನಗೆ ಎಂದು ಹೇಳಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.