ಬೆಂಗಳೂರು: ಬೆಂಗಳೂರಿನ ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಹರ್ಷಾನಂದ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ.
ರಾಮಕೃಷ್ಣ ಪರಮಹಂಸ ಹಾಗೂ ಸ್ವಾಮಿ ವಿವೇಕಾನಂದರ ತತ್ವಾದರ್ಶಗಳನ್ನು ಎತ್ತಿ ಹಿಡಿದ ವಿದ್ವಾಂಸರು ಅವರು. ಉತ್ತಮ ವಾಗ್ಮಿಗಳೂ ಆಗಿದ್ದರು ಎಂದು ಮುಖ್ಯಮಂತ್ರಿಗಳು ಸ್ಮರಿಸಿದ್ದಾರೆ.
ಭಗವಂತನು ಅವರಿಗೆ ಮೋಕ್ಷವನ್ನು ಕರುಣಿಸಲಿ. ಅವರ ಅನುಯಾಯಿಗಳಿಗೆ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.