ADVERTISEMENT

ಸರ್ಕಾರಿ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ: ಮುಖ್ಯ ಕಾರ್ಯದರ್ಶಿ ಆದೇಶ

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2024, 16:28 IST
Last Updated 23 ಆಗಸ್ಟ್ 2024, 16:28 IST
<div class="paragraphs"><p>ಶಾಲಿನಿ ರಜನೀಶ್ </p></div>

ಶಾಲಿನಿ ರಜನೀಶ್

   

ಬೆಂಗಳೂರು: ಸರ್ಕಾರದ ಎಲ್ಲಾ ಇಲಾಖೆ, ಆಯುಕ್ತಾಲಯ, ನಿರ್ದೆಶನಾಲಯ, ನಿಗಮ, ಮಂಡಳಿ, ಪ್ರಾಧಿಕಾರಗಳ ಆವರಣಗಳಲ್ಲಿನ ಹೆಸರು, ಪದನಾಮ, ಸೇವಾ ಅವಧಿಯ ನಾಮಫಲಕಗಳು, ಮಾರ್ಗಗಳ ಸೂಚನಾ ಫಲಕಗಳು, ಇನ್ನಿತರೇ ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿಯೇ ಪ್ರದರ್ಶಿಸಬೇಕು ಎಂದು ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಸೂಚಿಸಿದ್ದಾರೆ.

ರಾಜ್ಯದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಿರುತ್ತದೆ.  ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022 ಹಾಗೂ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ(ತಿದ್ದುಪಡಿ) ಅಧಿನಿಯಮ, 2024 ಜಾರಿಗೆ ಬಂದಿದೆ. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022 ರ ಅನ್ವಯ ಕನ್ನಡ ಭಾಷೆಯು ರಾಜ್ಯದ ಹಾಗೂ ಸ್ಥಳೀಯ ಪ್ರಾಧಿಕಾರದ ಅಧಿಕೃತ ಭಾಷೆಯಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ತೀರಾ ಅನಿವಾರ್ಯವಿದ್ದಲ್ಲಿ ಮಾತ್ರ ಕಡ್ಡಾಯವಾಗಿ ಕನ್ನಡ ಭಾಷೆಯು ಶೇ 60 ರಷ್ಟು ನಾಮಫಲಕದ ಮೇಲ್ಭಾಗದಲ್ಲಿರುವಂತೆ ಹಾಗೂ ಶೇ 40 ರಷ್ಟು ಆಂಗ್ಲಭಾಷೆಯಲ್ಲಿ ಪ್ರದರ್ಶಿಸಲು ಅಗತ್ಯ ಕ್ರಮ ವಹಿಸಬೇಕು ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.