ಉಜಿರೆ: ಗುರುವಾರ ಸಂಜೆ ಉಜಿರೆಯಲ್ಲಿ ನಡೆದ ಎಂಟು ವರ್ಷದ ಬಾಲಕನ ಅಪಹರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್ ಶುಕ್ರವಾರ ಬಾಲಕನ ಮನೆಗೆ ಭೇಟಿ ನೀಡಿ ಮಾಹಿತಿ ಕಲೆಹಾಕಿದರು.
ತನಿಖೆಯನ್ನು ಚುರುಕುಗೊಳಿಸಿದ್ದು ಪ್ರಕರಣ ಬೇಧಿಸಲು ನಾಲ್ಕು ತಂಡಗಳನ್ನು ರಚಿಸಲಾಗಿದೆ ಎಂದು ಎಸ್.ಪಿ. ತಿಳಿಸಿದ್ದಾರೆ.
ಅಪಹರಣಕಾರರು ಬಿಟ್ ಕಾಯಿನ್ ಯಾಕೆ ಕೇಳುತ್ತಿದ್ದರೆ ಎಂಬ ಬಗ್ಗೆ ಕೂಲಂಕಷ ತನಿಖೆ ನಡೆಸಲಾಗುತ್ತಿದೆ. ಆರೋಪಿಗಳು ಬಾಲಕನ ಮನೆಯವರ ಬಗ್ಗೆ ಪರಿಚಯದವರೇ ಆಗಿರಬೇಕು ಎಂದು ಶಂಕಿಸಲಾಗಿದೆ.
ಎಸ್.ಪಿ. ಅವರು ಮನೆಮಂದಿಯೊಂದಿಗೆ ಸುದೀರ್ಘ ಮಾತುಕತೆ ನಡೆಸಿ ಆರೋಪಿಗಳು ಪೋಷಕರಿಗೆ ಮೆಸೇಜ್ ಕಳಿಸುತ್ತಿರುವ ಬಗ್ಗೆ ಮಾಹಿತಿ ಪಡೆದರು.
ಅಪಹರಣಕಾರರು ಗುರುವಾರ ₹17 ಕೋಟಿ ಬೇಡಿಕೆ ಇಟ್ಟಿದ್ದು, ಶುಕ್ರವಾರ ₹10 ಕೋಟಿಗೆ ಇಳಿಸಿದ್ದಾರೆ. ಉಜಿರೆಯ ಉದ್ಯಮಿ ರಥಬೀದಿ ನಿವಾಸಿ ಎ.ಕೆ. ಶಿವನ್ ಅವರ ಮೊಮ್ಮಗ 8 ವರ್ಷದ ಅನುಭವ್ ನನ್ನು ಗುರುವಾರ ಸಂಜೆ ಕಾರಿನಲ್ಲಿ ಅಪಹರಿಸಲಾಗಿದೆ.
ಬಂಟ್ವಾಳ ಡಿವೈಎಸ್.ಪಿ ವೆಲೆಂಟೈನ್ ಡಿಸೋಜ, ಬೆಳ್ತಂಗಡಿ ಇನ್ ಸ್ಪೆಕ್ಟರ್ ಸಂದೇಶ್ ಪಿ.ಜಿ., ಸಬ್ ಇನ್ ಸ್ಪೆಕ್ಟರ್ ನಂದಕುಮಾರ್ ಮತ್ತು ಸಿಬ್ಬಂದಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.