ADVERTISEMENT

ರಾಜ್ಯದಲ್ಲಿ 27 ಕಾಲರಾ ಪ್ರಕರಣ ಪತ್ತೆ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2024, 14:46 IST
Last Updated 16 ಏಪ್ರಿಲ್ 2024, 14:46 IST
<div class="paragraphs"><p>ಸಾಂದರ್ಭಿಕ ಚಿತ್ರ&nbsp;</p></div>

ಸಾಂದರ್ಭಿಕ ಚಿತ್ರ 

   

ಬೆಂಗಳೂರು: ರಾಜ್ಯದಲ್ಲಿ ಈವರೆಗೆ ಒಟ್ಟು 27 ಕಾಲರಾ ಪ್ರಕರಣಗಳು ದೃಢಪಟ್ಟಿವೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ 13, ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ 10, ಮೈಸೂರಿನಲ್ಲಿ ಮೂರು ಹಾಗೂ ರಾಮನಗರದಲ್ಲಿ ಒಂದು ಪ್ರಕರಣ ವರದಿಯಾಗಿದೆ. ಏಪ್ರಿಲ್ ತಿಂಗಳಲ್ಲಿಯೇ 21 ಪ್ರಕರಣಗಳು ಖಚಿತಪಟ್ಟಿವೆ. 

ADVERTISEMENT

‘ಕಲುಷಿತ ನೀರು ಸೇವನೆ ಹಾಗೂ ಬೀದಿ ಬದಿ ತೆರೆದಿಟ್ಟ ಆಹಾರ ಸೇವನೆಯಿಂದ ಕಾಲರಾ ಸೋಂಕು ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಇದರಿಂದಾಗಿ ವ್ಯಕ್ತಿಯ ದೇಹದಲ್ಲಿ ವಾಂತಿ, ಭೇದಿ, ನಿರ್ಜಲೀಕರಣ, ಅತಿಸಾರ ಉಂಟಾಗಿ ವ್ಯಕ್ತಿಯು ನಿತ್ರಾಣಗೊಳ್ಳುತ್ತಾನೆ. ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಪಡೆಯುವುದರಿಂದ ಸೋಂಕಿನಿಂದ ಚೇತರಿಸಿಕೊಳ್ಳಬಹುದು’ ಎಂದು ಇಲಾಖೆ ತಿಳಿಸಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.