ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣವನ್ನು ಸಿಐಡಿಗೆ (ಅಪರಾಧ ತನಿಖಾ ವಿಭಾಗ) ವಹಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಆದೇಶಿಸಿದ್ದಾರೆ.
ಈ ಬಗ್ಗೆ ಮಾಹಿತಿಯನ್ನು ‘ಎಎನ್‌ಐ’ ಸುದ್ದಿ ಸಂಸ್ಥೆ ಎಕ್ಸ್‌ನಲ್ಲಿ ಹಂಚಿಕೊಂಡಿದೆ.
ಸಹಾಯ ಕೇಳಲು ಹೋಗಿದ್ದ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಡಿ ಬಿ.ಎಸ್. ಯಡಿಯೂರಪ್ಪ (81) ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು.
ಬಾಲಕಿಯ ತಾಯಿ ನೀಡಿರುವ ದೂರಿನಡಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಗುರುವಾರ (ಮಾರ್ಚ್ 14) ಪ್ರಕರಣ ದಾಖಲಾಗಿತ್ತು.
ಇದೇ ಫೆಬ್ರುವರಿ 2ರಂದು ಸಹಾಯ ಕೇಳಲು ಹೋಗಿದ್ದ ವೇಳೆ ಯಡಿಯೂರಪ್ಪ ಅವರು ಬಾಲಕಿಯನ್ನು ಕೊಠಡಿಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.