ಬೆಂಗಳೂರು: ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಮನೆಯವರಿಗೆ ನನ್ನ ಕಚೇರಿಯಲ್ಲಿ ಉದ್ಯೋಗ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿರುವ ‘ಜನಸ್ಪಂದನ’ ಸಮಾವೇಶದಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷಕ್ಕೆ (ಬಿಜೆಪಿ) ಕಾರ್ಯಕರ್ತರೇ ಜೀವಾಳ ಎಂದರು.
ಜುಲೈ 26ರಂದು ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಬೈಕ್‌ನಲ್ಲಿ ಬಂದ ಅಪರಿಚಿತರು ತಲವಾರಿನಿಂದ ಪ್ರವೀಣ್ ಅವರ ತಲೆಗೆ ಹೊಡೆದು ಪರಾರಿಯಾಗಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭದಲ್ಲಿ ಮೃತಪಟ್ಟಿದ್ದರು.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಗೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಮಂಗಳವಾರ ಬೆಳಿಗ್ಗೆ ಪುತ್ತೂರು ಮತ್ತು ಸುಳ್ಯದಲ್ಲಿ 32 ಕಡೆ ಮನೆ, ಕಟ್ಟಡಗಳ ಮೇಲೆ ದಾಳಿ ನಡೆಸಿ ಆರೋಪಿಗಳು ಮತ್ತು ಆರೋಪಿಗಳಿಗೆ ಸಹಕರಿಸಿದವರ ವಿಚಾರಣೆ ನಡೆಸಿರುವುದಾಗಿ ತಿಳಿದು ಬಂದಿದೆ.
ಇವನ್ನೂ ಓದಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.