ಬೆಂಗಳೂರು: ಕರಾವಳಿ ಭಾಗದಲ್ಲಿ 'ತೌಕ್ತೆ' ಚಂಡಮಾರುತದಿಂದ ಉಂಟಾಗಿರುವ ಹಾನಿ ಮತ್ತು ಸದ್ಯದ ಪರಿಸ್ಥಿತಿಯ ಬಗ್ಗೆ ಆ ಭಾಗದ ಜಿಲ್ಲಾಧಿಕಾರಿಗಳಿಂದ ಭಾನುವಾರ ಬೆಳಿಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾಹಿತಿ ಪಡೆದರು.
ಚಂಡಮಾರುತದಿಂದ ಹಾನಿಗೆ ಒಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಹಾರ ಹಾಗು ರಕ್ಷಣಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವಂತೆ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲಾಧಿಕಾರಿಗಳು ಮತ್ತುಸಚಿವರುಗಳಿಗೆ ಕರೆ ಮಾಡಿ ಸೂಚನೆ ನೀಡಿದರು.
'ರಾಜ್ಯ ಸರ್ಕಾರದಿಂದ ಏನೇ ತುರ್ತು ನೆರವು ಬೇಕಿದ್ದರೂ ಸಂಬಂಧಪಟ್ಟ ಸಚಿವರುಗಳಿಗೆ ಕರೆ ಮಾಡಿ ತಿಳಿಸಿ. ಅಥವಾ ನೇರವಾಗಿ ನನಗೆ ಕರೆ ಮಾಡಿ. ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಸಮರೋಪಾದಿಯಲ್ಲಿ ತೆಗೆದುಕೊಳ್ಳಿ' ಎಂದೂ ಮುಖ್ಯಮಂತ್ರಿ ಸಲಹೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.