ADVERTISEMENT

ಚುನಾವಣೆ ನಂತರವೇ ಸಿ.ಎಂ ಅಭ್ಯರ್ಥಿ ನಿರ್ಧಾರ: ಬಿ.ಎಸ್‌. ಯಡಿಯೂರಪ್ಪ

ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌. ಯಡಿಯೂರಪ್ಪ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2023, 18:38 IST
Last Updated 20 ಮಾರ್ಚ್ 2023, 18:38 IST
ಬಿ.ಎಸ್.ಯಡಿಯೂರಪ್ಪ
ಬಿ.ಎಸ್.ಯಡಿಯೂರಪ್ಪ   

ಹಿರಿಯೂರು (ಚಿತ್ರದುರ್ಗ): ವಿಧಾನಸಭೆ ಚುನಾವಣೆ ಫಲಿತಾಂಶದ ನಂತರವೇ ಮುಂದಿನ ಮುಖ್ಯಮಂತ್ರಿ ಕುರಿತು ಪಕ್ಷ ನಿರ್ಧರಿಸಲಿದೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌. ಯಡಿಯೂರಪ್ಪ ತಿಳಿಸಿದರು.

ಸೋಮವಾರ ಹಿರಿಯೂರಿನಲ್ಲಿ ನಡೆದ ವಿಜಯ ಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

‘ರಾಜ್ಯದಲ್ಲಿ ಬಿಜೆಪಿಗೆ ನಿರೀಕ್ಷೆ ಮೀರಿ ಸ್ಪಂದನೆ ವ್ಯಕ್ತವಾಗುತ್ತಿದೆ. ಪಕ್ಷ 140ಕ್ಕೂ ಅಧಿಕ ಸ್ಥಾನ ಗೆಲ್ಲುವ ವಿಶ್ವಾಸವಿದೆ. ಮುಂದಿನ ಸಿ.ಎಂ ನಾನೇ ಎಂದು ಕೆಲವರು ಮಾತನಾಡುತ್ತಿದ್ದಾರೆ. ಇದಕ್ಕೆ ವಿಶೇಷ ಅರ್ಥವಿಲ್ಲ‘ ಎಂದು ಹೇಳಿದರು.

ADVERTISEMENT

ಪಕ್ಷಾಂತರ ವದಂತಿಗೆ ತೆರೆ: ಹಿರಿಯೂರು ಶಾಸಕಿ ಕೆ.ಪೂರ್ಣಿಮಾ ಕಾಂಗ್ರೆಸ್‌ ಸೇರುತ್ತಾರೆ ಎಂಬ ವದಂತಿಗೆ ಅವರು ತೆರೆ ಎಳೆದರು. ಶಾಸಕಿಯ ಹೆಗಲ ಮೇಲೆ ಕೈಹಾಕಿ, ‘ಇವರು ನಮ್ಮ ಜೊತೆಯೇ ಇದ್ದಾರೆ’ ಎಂದು ಹೇಳಿದರು.

ಕಾಂಗ್ರೆಸ್ ಸೇರ್ಪಡೆ ಮುಗಿದ ಅಧ್ಯಾಯ: ವಿ.ಸೋಮಣ್ಣ

ಕೊಳ್ಳೇಗಾಲ: ‘ನಾನು ಕಾಂಗ್ರೆಸ್ ಪಕ್ಷ ಸೇರುವ ವಿಚಾರ ಈಗ ಮುಗಿದ ಅಧ್ಯಾಯ’ ಎಂದು ಸಚಿವ ವಿ.ಸೋಮಣ್ಣ ಸೋಮವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಚಾಮರಾಜನಗರ ಜಿಲ್ಲೆ ಯಿಂದ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಯೋಚಿಸಿಲ್ಲ. ಸ್ಪರ್ಧೆ ವಿಚಾರದಲ್ಲಿ ಪಕ್ಷದ ತೀರ್ಮಾನವೇ ಅಂತಿಮ’ ಎಂದು ಸ್ಪಷ್ಟಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.