ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕೂಗು ಕೇಳಿಬರುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ಶಾಸಕ ಎಂ.ಬಿ.ಪಾಟೀಲ್ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪರ ಬ್ಯಾಟಿಂಗ್ ಮಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಲಿಂಗಾಯತ ಸಮುದಾಯದ ಧೀಮಂತ ನಾಯಕರು. ಅವರನ್ನು ಪದಚ್ಯುತಗೊಳಿಸಿದರೆ, ನಿಶ್ಚಿತವಾಗಿಯೂ ಬಿಜೆಪಿ ವರಿಷ್ಠರು ಲಿಂಗಾಯತರ ಅವಕೃಪೆಗೆ ತುತ್ತಾಗುತ್ತಾರೆ ಎಂದು ಹೇಳಿದ್ದಾರೆ.
ಮುಂದುವರಿದು, ಯಡಿಯೂರಪ್ಪನವರ ವಯಸ್ಸು ಮತ್ತು ಕೊಡುಗೆಯನ್ನು ಪರಿಗಣಿಸಿ, ಅವರನ್ನು ಘನತೆ ಮತ್ತು ಮರ್ಯಾದೆಯಿಂದ ನಡೆಸಿಕೊಳ್ಳಬೇಕೆಂಬುದು ನನ್ನ ವೈಯಕ್ತಿಕ ಅನಿಸಿಕೆ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.