ADVERTISEMENT

ಸಿಎಂ ಜನತಾ ದರ್ಶನ ಇದೇ 27ಕ್ಕೆ

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2023, 14:12 IST
Last Updated 24 ನವೆಂಬರ್ 2023, 14:12 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ 27 ರಂದು ಬೆಳಿಗ್ಗೆ 9.30 ರಿಂದ ಗೃಹ ಕಚೇರಿ ಕೃಷ್ಣಾದಲ್ಲಿ ಜನತಾ ದರ್ಶನ ನಡೆಸಿ, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ.

ಜನರ ಬಳಿಗೇ ಆಡಳಿತ ಕೊಂಡೊಯ್ಯುವ ನಿಟ್ಟಿನಲ್ಲಿ ಎಲ್ಲ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಪ್ರತಿ ತಿಂಗಳು ಜನತಾ ದರ್ಶನ ನಡೆಸುವಂತೆ ಮುಖ್ಯಮಂತ್ರಿ ಸೂಚಿಸಿದ್ದರು.  ಮುಖ್ಯಮಂತ್ರಿಯವರೇ, ಬೆಂಗಳೂರಿನಲ್ಲಿ ಜನತಾ ದರ್ಶನ ನಡೆಸಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳಲಿದ್ದಾರೆ ಎಂದು ಮುಖ್ಯಮಂತ್ರಿ ಸಚಿವಾಲಯ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT