ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಗುರುವಾರ ಸಂಜೆ ನವದೆಹಲಿಯಲ್ಲಿ ಭೇಟಿ ಮಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕರ್ನಾಟಕಕ್ಕೆ 15ನೇ ಹಣಕಾಸು ಆಯೋಗದ ವಿಶೇಷ ಅನುದಾನ ₹ 5,495
ಕೋಟಿ ನೀಡುವಂತೆ ಮಾಡಿದ ಶಿಫಾರಸು ಒಪ್ಪಿಕೊಳ್ಳುವಂತೆ ಮನವಿ ಮಾಡಿದರು.
ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮೀಣ ಭಾಗದ ಸ್ಥಳೀಯ ಸಂಸ್ಥೆಗಳಿಗೆ ಶಿಫಾರಸು ಮಾಡಿದ ಕಾರ್ಯಕ್ಷಮತೆ ಅನುದಾನ ₹ 2100.25 ಕೋಟಿಯಲ್ಲಿ ಈವರೆಗೆ ₹ 869.40 ಕೋಟಿ ಮಾತ್ರ ಬಂದಿದೆ. ಉಳಿದ ₹ 1,230.85 ಕೋಟಿಯನ್ನೂ ಬಿಡುಗಡೆ ಮಾಡುವಂತೆಯೂ ನಿರ್ಮಲಾ ಅವರಿಗೆ ಸಲ್ಲಿಸಿದ ಮನವಿಯಲ್ಲಿ ಮುಖ್ಯಮಂತ್ರಿ ಕೋರಿದ್ದಾರೆ.
ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ಅನುದಾನವನ್ನು ಸೂಕ್ತ ಸಮಯದಲ್ಲಿ ಬಿಡುಗಡೆ ಮಾಡಿದ್ದಕ್ಕಾಗಿ ನಿರ್ಮಲಾ ಅವರಿಗೆ ಧನ್ಯವಾದ ಹೇಳಿದ ಅವರು, ಯೋಜನೆಯ ಪರಿಕರಗಳ ಬಾಕಿ ₹ 665.09 ಕೋಟಿ ಮತ್ತು ಕೌಶಲರಹಿತರ ವೇತನದ ಬಾಕಿ ₹ 54.65 ಕೋಟಿಯನ್ನು ಆದಷ್ಟು ಶೀಘ್ರ ಬಿಡುಗಡೆ ಮಾಡುವಂತೆ ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.