ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ನಬಾರ್ಡ್‌ನಿಂದ ರಾಜ್ಯದ ರೈತರಿಗೆ ಆಗಿರುವ ಸಾಲದ ಕೊರತೆಯನ್ನು ಸರಿಪಡಿಸಿ, ಆಗಿರುವ ಅನ್ಯಾಯವನ್ನು ಸರಿದೂಗಿಸುವಂತೆ ಇಂದು (ಗುರುವಾರ) ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಚಿವರಾದ ಬೈರತಿ ಸುರೇಶ್, ಚಲುವರಾಯಸ್ವಾಮಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಉಪಸ್ಥಿತರಿದ್ದರು.
ಈ ಮೊದಲು ದೆಹಲಿ ಭೇಟಿ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ್ದ ಮುಖ್ಯಮಂತ್ರಿ, ‘ನಬಾರ್ಡ್ ಕಳೆದ ವರ್ಷ ರಾಜ್ಯಕ್ಕೆ ₹5,600 ಕೋಟಿ ಸಾಲ ನೀಡಿತ್ತು. ಈ ವರ್ಷ ₹2,340 ಕೋಟಿಗೆ ಕಡಿತ ಮಾಡಿದೆ. ಈ ಬಗ್ಗೆ ಕೇಂದ್ರ ವಿತ್ತ ಸಚಿವರನ್ನು ಭೇಟಿ ಮಾಡಿ ಮನವಿ ಮಾಡಲಾಗುವುದು’ ಎಂದಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.