ADVERTISEMENT

ರಾಮ ಮಂದಿರ ಉದ್ಘಾಟನೆ | ರಾಜ್ಯದಲ್ಲಿ ರಜೆ ನೀಡಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 21 ಜನವರಿ 2024, 12:43 IST
Last Updated 21 ಜನವರಿ 2024, 12:43 IST
<div class="paragraphs"><p>ಮುಖ್ಯಮಂತ್ರಿ ಸಿದ್ದರಾಮಯ್ಯ</p></div>

ಮುಖ್ಯಮಂತ್ರಿ ಸಿದ್ದರಾಮಯ್ಯ

   

ತುಮಕೂರು: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ದಿನ ರಾಜ್ಯದಲ್ಲಿ ರಜೆ ಘೋಷಣೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಸಿದ್ಧಗಂಗಾ ಮಠದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಶಿವಕುಮಾರ ಸ್ವಾಮೀಜಿ 5ನೇ ವರ್ಷದ ಸಂಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.

ADVERTISEMENT

‘ಶ್ರೀರಾಮ ಮಂದಿರ ಉದ್ಘಾಟನೆ ದಿನ ರಾಜ್ಯದ ಎಲ್ಲಾ ಮುಜರಾಯಿ ದೇವಸ್ಥಾನಗಳಲ್ಲಿ ಪೂಜೆ ನಡೆಯಲಿದೆ. ಬೆಂಗಳೂರಿನ ಮಹಾದೇವಪುರದಲ್ಲಿ ನಿರ್ಮಿಸಿರುವ ಶ್ರೀರಾಮ ಮಂದಿರ ಉದ್ಘಾಟನೆಗೆ ಕರೆದಿದ್ದು, ಅಲ್ಲಿಗೆ ಹೋಗುತ್ತೇನೆ’ ಎಂದರು.

ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾದ ದಿನವನ್ನು (ಜ.21) ದಾಸೋಹ ದಿನವೆಂದು ಹಿಂದಿನ ಸರ್ಕಾರ ಘೋಷಣೆ ಮಾಡಿರುವುದು ನನಗೆ ಗೊತ್ತಿಲ್ಲ. ಈ ಬಗ್ಗೆ ವಿಚಾರ ಮಾಡಿ ಆಚರಣೆ ಬಗ್ಗೆ ಗಮನ ಹರಿಸಲಾಗುವುದು ಎಂದು ಹೇಳಿದರು.

ಕೇಂದ್ರ ಸರ್ಕಾರ ಬೆಂಬಲ ಬೆಲೆಯಲ್ಲಿ ನಾಫೆಡ್ ಮೂಲಕ ಕೊಬ್ಬರಿ ಖರೀದಿಸಲಿದ್ದು, ರಾಜ್ಯ ಸರ್ಕಾರ ಹೆಚ್ಚುವರಿಯಾಗಿ ಕ್ವಿಂಟಲ್‌ಗೆ ₹1,500 ಪ್ರೋತ್ಸಾಹ ಧನ ನೀಡಲಿದೆ. ಕುಣಿಗಲ್ ಸ್ಟಡ್ ಫಾರಂ ಮುಚ್ಚುವುದಿಲ್ಲ. ಬೆಂಗಳೂರಿನ ಹೃದಯ ಭಾಗದಲ್ಲಿ ಇರುವ ರೇಸ್‌ ಕೋರ್ಸ್‌ಅನ್ನು ಕುಣಿಗಲ್‌ಗೆ ಸ್ಥಳಾಂತರಿಸುವಂತೆ ಸಲಹೆ ಮಾಡಿದ್ದೇನೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.