‘ಮೊದಲಿಗೆ ರಾಜ್ಯದ ಜನರಿಗೆ ಏಳು ಕೆಜಿ ಅಕ್ಕಿ ಕೊಟ್ಟವರು ನಾವು. ಇದನ್ನು ಐದು ಕೆಜಿಗೆ ಇಳಿಸಿದ್ದು ಯಡಿಯೂರಪ್ಪ. ಈಗ ಯಡಿಯೂರಪ್ಪ ಅವರ ಮಗ ವಿಜಯೇಂದ್ರನಿಗೆ ಈ ಬಗ್ಗೆ ಮಾತಾಡಲು ಯಾವ ನೈತಿಕತೆ ಇದೆ’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು. ಮೈಸೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು, ‘ಯಡಿಯೂರಪ್ಪ ಅಕ್ಕಿ ಪ್ರಮಾಣವನ್ನು ಐದು ಕೆಜಿಗೆ ಇಳಿಸಿದ್ದನ್ನು ಹತ್ತು ಕೆಜಿಗೆ ಏರಿಸಿದ್ದು ನಾವು. ಈ ಸತ್ಯ ರಾಜ್ಯದ ಜನರಿಗೆ ಗೊತ್ತಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.