ADVERTISEMENT

ಬಿಜೆಪಿ ವಿರುದ್ಧ CM ಸಿದ್ದರಾಮಯ್ಯ ಮಾಡಿರುವ ಆರೋಪದಲ್ಲಿ ಹುರುಳಿದೆ: ಸಂತೋಷ್ ಲಾಡ್

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2024, 8:07 IST
Last Updated 14 ನವೆಂಬರ್ 2024, 8:07 IST
<div class="paragraphs"><p>ಕಾರ್ಮಿಕ ಸಚಿವ ಸಂತೋಷ್ ಲಾಡ್</p></div>

ಕಾರ್ಮಿಕ ಸಚಿವ ಸಂತೋಷ್ ಲಾಡ್

   

ಬೆಂಗಳೂರು: 'ರಾಜ್ಯ ಸರ್ಕಾರ ಪತನಗೊಳಿಸಲು ಕಾಂಗ್ರೆಸ್ ಶಾಸಕರಿಗೆ ಬಿಜೆಪಿ ನಾಯಕರು ತಲಾ ₹50 ಕೋಟಿ ಆಮಿಷ ಒಡ್ಡಿದ್ದರು ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಪದಲ್ಲಿ ಹುರುಳಿದೆ' ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.

ಮುಖ್ಯಮಂತ್ರಿಯವರ ಆರೋಪ‌ ಕುರಿತು ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, '18 ತಿಂಗಳಿನಿಂದಲೂ ಬಿಜೆಪಿಯವರು ಅಂತಹ ಪ್ರಯತ್ನ ಮಾಡುತ್ತಲೇ ಇದ್ದಾರೆ' ಎಂದರು.

ADVERTISEMENT

'ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎಲ್ಲವೂ ಸಾಧ್ಯ. ಸರ್ಕಾರ ಅಸ್ಥಿರಗೊಳಿಸುವುದೇ ಅವರ ಕೆಲಸ. ಸತತವಾಗಿ ಆ ಪ್ರಯತ್ನದಲ್ಲೇ ಇದ್ದಾರೆ' ಎಂದು ವಾಗ್ದಾಳಿ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.