ADVERTISEMENT

ಬೆಳಗಾವಿ ಅಧಿವೇಶನಕ್ಕೆ ಬರುವಂತೆ ಒಬಾಮಾ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಸಚಿವ ಎಚ್‌.ಕೆ.ಪಾಟೀಲ ತಿಳಿಸಿದರು.

​ಪ್ರಜಾವಾಣಿ ವಾರ್ತೆ
Published 4 ನವೆಂಬರ್ 2024, 16:00 IST
Last Updated 4 ನವೆಂಬರ್ 2024, 16:00 IST
ಬರಾಕ್ ಒಬಾಮಾ
ಬರಾಕ್ ಒಬಾಮಾ   

ಗದಗ: ‘1924ರಲ್ಲಿ ಬೆಳಗಾವಿಯಲ್ಲಿ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ನಡೆದ 39ನೇ ಎಐಸಿಸಿ ಅಧಿವೇಶನಕ್ಕೆ ಈಗ ಶತಮಾನೋತ್ಸವ ಸಂಭ್ರಮ. ಆ ನೆನಪನ್ನು ಮೆಲುಕು ಹಾಕುವ ಸಲುವಾಗಿ 2024ರ ಅ.2ರಿಂದ 2025ರ ಅ.2ರವರೆಗೆ ಶತಮಾನೋತ್ಸವ ಆಚರಣೆಗೆ ನಿರ್ಧರಿಸಲಾಗಿದೆ’ ಎಂದು ಸಚಿವ ಎಚ್‌.ಕೆ.ಪಾಟೀಲ ತಿಳಿಸಿದರು.

‘ಈ ಅವಧಿಯಲ್ಲಿ ಗಾಂಧೀಜಿ ಅವರ ತತ್ವ ಸಿದ್ಧಾಂತಗಳನ್ನು ಜನರಿಗೆ ತಲುಪಿಸುವ ಉದ್ದೇಶ ಹೊಂದಲಾಗಿದೆ. ಜತೆಗೆ ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲು ರಾಜ್ಯಕ್ಕೆ ಬರಬೇಕು ಎಂದು ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್‌ ಒಬಾಮಾ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ’ ಎಂದು ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಕ್ರಿಸ್‌ಮಸ್‌ ಹಾಗೂ ಹೊಸ ವರ್ಷಾಚರಣೆ ಅವರಿಗೆ ಮಹತ್ವದ ಸಂದರ್ಭ. ಆದಕಾರಣ, 2024ರ ಡಿಸೆಂಬರ್‌ ಅಥವಾ 2025ರ ಜ.1ರ ನಂತರ ಹಾಗೂ ಅ.2ರ ನಡುವಿನ ಅವಧಿಯಲ್ಲಿ ಅನುಕೂಲ ನೋಡಿಕೊಂಡು ಬರುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ’ ಎಂದು ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.