ADVERTISEMENT

ಅಸಂಬದ್ಧ ಟ್ವೀಟ್‌ಗಳಿಂದ ಅಜ್ಞಾನ ಪ್ರದರ್ಶಿಸಬೇಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 30 ಮೇ 2024, 16:29 IST
Last Updated 30 ಮೇ 2024, 16:29 IST
<div class="paragraphs"><p>ಮುಖ್ಯಮಂತ್ರಿ ಸಿದ್ದರಾಮಯ್ಯ</p></div>

ಮುಖ್ಯಮಂತ್ರಿ ಸಿದ್ದರಾಮಯ್ಯ

   

ಬೆಂಗಳೂರು: ‘ನಿಮ್ಮ ಟ್ವೀಟ್ ನಿಮ್ಮ ಪರಮ ಅಜ್ಞಾನದ ಫಲವೊ? ವಿರೋಧ ಪಕ್ಷದ ನಾಯಕ ಅಸ್ವಿತ್ವದಲ್ಲಿದ್ದಾರೆ ಎಂದು ತಿಳಿಸಲೊ? ಇದು ನಮ್ಮನ್ನೂ ಸೇರಿಸಿಕೊಂಡಂತೆ ರಾಜ್ಯದ ಜನಸಾಮಾನ್ಯರಿಗೂ ಅರ್ಥವಾಗದಿರುವ ಯಕ್ಷ ಪ್ರಶ್ನೆ’ ಎಂದು ಆರ್‌. ಅಶೋಕ ಅವರನ್ನು ಉದ್ದೇಶಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟಕಿಯಾಡಿದ್ದಾರೆ.

ಅಶೋಕ ಅವರ ಟ್ವೀಟ್‌ಗೆ ತಮ್ಮ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ‘ಸಾರಿಗೆ ಸಂಸ್ಥೆಗಳಲ್ಲಿ ಎಲೆಕ್ಟ್ರಿಕ್ ಬಸ್‌ಗಳ ಸೇರ್ಪಡೆಯು ಕೇಂದ್ರ ಸರ್ಕಾರದ ನೀತಿ ಯೋಜನೆಯಂತೆ ಜಾರಿಯಾಗಿದೆ. ಎಲೆಕ್ಟ್ರಿಕ್ ಬಸ್‌ಗಳನ್ನು ಸಾರಿಗೆ ಸಂಸ್ಥೆಗಳು ನೇರವಾಗಿ ಖರೀದಿಸುವಂತಿಲ್ಲ, ಖಾಸಗಿ ಕಂಪನಿಯವರು ಮಾಲೀಕತ್ವ ಹೊಂದಿರುತ್ತಾರೆ. ಅವರಿಗೆ ಕೇಂದ್ರ ಸರ್ಕಾರವು ನೇರವಾಗಿ ಸಬ್ಸಿಡಿ ನೀಡುತ್ತದೆ ಹಾಗೂ ಚಾಲಕರನ್ನು ನಿಯೋಜಿಸುವ ಕಾರ್ಯವು ಖಾಸಗಿ ಅವರಿಗೆ ನೀಡಲಾಗಿದೆ‌’ ಎಂದಿದ್ದಾರೆ.

ADVERTISEMENT

‘ಚಾಲಕರ ವೇತನ, ಆಯ್ಕೆ ಯಾವುದರಲ್ಲಿಯೂ ಸಾರಿಗೆ ಸಂಸ್ಥೆಗಳಿಗೆ ತೀರ್ಮಾನ ತೆಗೆದುಕೊಳ್ಳುವ ಅಧಿಕಾರವಿಲ್ಲ. ಬಸ್‌ಗಳ ಕಾರ್ಯಾಚರಣೆ ಹೊಣೆ ಮಾತ್ರ ಸಾರಿಗೆ ಸಂಸ್ಥೆಗಳದ್ದು. ಈ ವಿಷಯವನ್ನು ನಮ್ಮ ಸಾರಿಗೆ ಸಚಿವರು ಹಲವು ಬಾರಿ ಸ್ಪಷ್ಟಪಡಿಸಿದ್ದಾರೆ. ತಮಗೆ ಅದು ಅರ್ಥವಾಗದಿರುವುದು ನಿಜಕ್ಕೂ ಶೋಚನೀಯ’ ಎಂದು ಟೀಕಿಸಿದ್ದಾರೆ.

‘ಯುವಕರಿಗೆ ಅದರಲ್ಲಿಯೂ ರಾಜ್ಯದ ಯುವಕರಿಗೆ ನಿರುದ್ಯೋಗ ಭಾಗ್ಯ ಕಲ್ಪಿಸಲು ಕಾರಣವಾದ ಕೇಂದ್ರ ಬಿಜೆಪಿ ಸರ್ಕಾರದ ಈ ಯೋಜನೆಯ ಬಗೆಗಿನ ತಮ್ಮ ನೋವು, ದುಃಖ ಮತ್ತು ಸಂಕಟಗಳಿಗೆ ಉತ್ತರ ಕಂಡುಕೊಳ್ಳುವ ತವಕ ನಿಮ್ಮಲ್ಲಿದ್ದರೆ ದಯವಿಟ್ಟು ನಿಮ್ಮ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿ ಉತ್ತರ ಪಡೆಯಿರಿ. ಅಸಂಬದ್ಧ ಟ್ವೀಟ್‌ಗಳ ಮೂಲಕ ಅಜ್ಞಾನ ಪ್ರದರ್ಶಿಸಬೇಡಿ’ ಎಂದು ಕುಟುಕಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.