ಬೆಂಗಳೂರು:ರಾಜ್ಯದ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಕೊರತೆ ಉಂಟಾಗಿದ್ದು, 1720 ಮೆಗಾವ್ಯಾಟ್ ಸಾಮರ್ಥ್ಯದ ರಾಯಚೂರು ಉಷ್ಣ ಸ್ಥಾವರದಲ್ಲಿ ಶೂನ್ಯ ಕಲ್ಲಿದ್ದಲು ಸಂಗ್ರಹಣೆ ಇದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಈ ಸ್ಥಿತಿಗೆ ಕಾರಣ, ಕೇಂದ್ರ ಸರ್ಕಾರಿ ಸ್ವಾಮ್ಯದ ವೆಸ್ಟರ್ನ್ ಕೋಲ್ ಫಿಲ್ಡ್ಸ್ (WLC) ನವರು, ಒಪ್ಪಂದದ ಪ್ರಕಾರ ನೀಡಬೇಕಾಗಿದ್ದ ಒಟ್ಟು ಪ್ರಮಾಣದಲ್ಲಿ ಸುಮಾರು 6 ಲಕ್ಷ ಟನ್ ಗಳಷ್ಟು ಕಲ್ಲಿದ್ದಲನ್ನು ಈವರೆಗೂ ಪೂರೈಕೆ ಮಾಡಿಲ್ಲ ಎಂದು ಕುಮಾರಸ್ವಾಮಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೇಂದ್ರ ಸರ್ಕಾರಿ ಸ್ವಾಮ್ಯದ ಎಂ.ಸಿ.ಎಲ್ ಮುಖಾಂತರಕಲ್ಲಿದ್ದಲು ಪೂರೈಕೆ ಮಾಡಬೇಕೆಂದು ಕಲ್ಲಿದ್ದಲು ಸಚಿವರಾದ ಪಿಯೂಷ್ ಗೋಯಲ್ ಅವರಿಗೆ ಪತ್ರ ಬರೆದಿರುವುದಾಗಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಒಪ್ಪಂದದ ಪ್ರಕಾರ ಪೂರ್ಣ ಪ್ರಮಾಣದಲ್ಲಿ ಕಲ್ಲಿದ್ದಲು ಪೂರೈಕೆ ಮಾಡಿದರೆ ವಿದ್ಯುತ್ ಉತ್ಪಾದನೆಗೆ ಯಾವುದೇ ರೀತಿಯ ಅಡಚಣೆಯಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.