ADVERTISEMENT

ಹಣ ಕೇಳಿದರೆ ದೂರು ನೀಡಿ: ತಾಂತ್ರಿಕ ಶಿಕ್ಷಣ ಇಲಾಖೆ ಸುತ್ತೋಲೆ

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2024, 16:20 IST
Last Updated 13 ಸೆಪ್ಟೆಂಬರ್ 2024, 16:20 IST
<div class="paragraphs"><p>ಹಣ </p></div>

ಹಣ

   

ಬೆಂಗಳೂರು: ಅನುದಾನಿತ ಪಾಲಿಟೆಕ್ನಿಕ್‌, ಎಂಜಿನಿಯರಿಂಗ್‌ ಕಾಲೇಜುಗಳ ಕೆಲಸಗಳಿಗೆ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಸೇರಿದಂತೆ ಯಾರಾದರೂ ಹಣಕ್ಕೆ ಬೇಡಿಕೆ ಇಟ್ಟರೆ ಕೇಂದ್ರ ಕಚೇರಿಗೆ ಅಥವಾ ಲೋಕಾಯುಕ್ತಕ್ಕೆ ದೂರು ನೀಡುವಂತೆ ತಾಂತ್ರಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ಕೇಂದ್ರ ಕಚೇರಿಯಲ್ಲಿನ ಅಧಿಕಾರಿಗಳು ಮತ್ತು ಸಿಬ್ಬಂದಿ ಹೆಸರು ಬಳಸಿಕೊಂಡು ಸಿಬ್ಬಂದಿ ವೇತನ, ಸಹಾಯಾನುದಾನ, ವೇತನ ಬಾಕಿಗಳು, ಪಿಂಚಣಿ ಮಂಜೂರಾತಿ ಸೌಲಭ್ಯಗಳನ್ನು ಮಾಡಿಕೊಡುವುದಾಗಿ ಉಪನ್ಯಾಸಕರು ಹಾಗೂ ಬೋಧಕೇತರ ಬಳಿ ಹಣ ವಸೂಲಿ ಮಾಡುತ್ತಿರುವ ಸುದ್ದಿಗಳು ಹರಿದಾಡುತ್ತಿವೆ. ಯಾರಾದರೂ ಇಂತಹ ಬೇಡಿಕೆ ಇಟ್ಟರೆ ತಕ್ಷಣ 080–2220077, 22200291ಗೆ ಮಾಹಿತಿ ನೀಡಬೇಕು ಎಂದು ತಾಂತ್ರಿಕ ಶಿಕ್ಷಣ ಇಲಾಖೆ ನಿರ್ದೇಶಕರು ಕೋರಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.