ADVERTISEMENT

ಮಾನವ ಹಕ್ಕುಗಳ ಉಲ್ಲಂಘನೆ ಆರೋಪ: ಬಿಗ್‌ಬಾಸ್ ಶೋ ವಿರುದ್ಧ ದೂರು

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2024, 20:13 IST
Last Updated 4 ಅಕ್ಟೋಬರ್ 2024, 20:13 IST
   

ಬೆಂಗಳೂರು: ‘ಕಲರ್ಸ್‌ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ರಿಯಾಲಿಟಿ ಶೋ ‘ಬಿಗ್‌ ಬಾಸ್‌’ನಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದ್ದು, ತಕ್ಷಣ ಕಾರ್ಯಕ್ರಮ ನಿಲ್ಲಿಸಿ ಸಂಬಂಧಪಟ್ಟ ಇಲಾಖೆಯಿಂದ ತನಿಖೆ ನಡೆಸಬೇಕು’ ಎಂದು ಕೋರಿ ಸಾಮಾಜಿಕ ಕಾರ್ಯಕರ್ತೆ ಎಂ.ನಾಗಮಣಿ ಅವರು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದಾರೆ.

ಕಲರ್ಸ್‌ ಕನ್ನಡ ವಾಹಿನಿಯ ಬ್ಯುಸಿನೆಸ್ ಹೆಡ್‌, ನಿರೂಪಕ ಸುದೀಪ್ ಹಾಗೂ ವಯಕಾಮ್ ಮೀಡಿಯಾ ಪ್ರೈವೇಟ್‌ ಲಿಮಿಟೆಡ್‌ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ.

‘ಮನರಂಜನಾ ಹಾಗೂ ಇತರೆ ಕ್ಷೇತ್ರದಲ್ಲಿ ಹೆಸರು ಮಾಡಿದ ವ್ಯಕ್ತಿಗಳನ್ನು ಒಂದು ಮನೆಯಲ್ಲಿ ಕೂಡಿ ಹಾಕಿ ನಡೆಸುವ ಶೋ ಇದು. ಸ್ಪರ್ಧಿಗಳಿಗೆ ಹಲವು ರೀತಿಯ ಮಾನಸಿಕ, ದೈಹಿಕ ಸವಾಲುಗಳನ್ನು ನೀಡಲಾಗುತ್ತದೆ. ತಮ್ಮನ್ನು ತಾವು ಉಳಿಸಿಕೊಳ್ಳಲು ಇನ್ನೊಬ್ಬರ ಮೇಲೆ ಹಲವು ರೀತಿಯಲ್ಲಿ ಆಕ್ರಮಣ ಮಾಡುವ ಅನಿವಾರ್ಯತೆ ಸೃಷ್ಟಿಸಲಾಗುತ್ತದೆ. ಚಿತ್ರಹಿಂಸೆ, ಕ್ರೌರ್ಯದ ದೃಶ್ಯಗಳನ್ನು ಮಾಧ್ಯಮದ ಮೂಲಕ ಪ್ರಸಾರ ಮಾಡುವುದು ಅಪರಾಧ. ಹಾಗಾಗಿ ಕಾರ್ಯಕ್ರಮ ಸ್ಥಗಿತಗೊಳಿಸಬೇಕು’ ಎಂದು ಮನವಿ ಮಾಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.