ADVERTISEMENT

‘ಸೇಂಟ್‌ ಕ್ಸೇವಿಯರ್‌’ ವಿರುದ್ಧ ದೂರು

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2024, 16:22 IST
Last Updated 12 ಫೆಬ್ರುವರಿ 2024, 16:22 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ಸಂಜೀವ ನಗರದ ಸೇಂಟ್‌ ಕ್ಸೇವಿಯರ್‌ ಎಜುಕೇಷನಲ್‌ ಮತ್ತು ಚಾರಿಟೆಬಲ್‌ ಟ್ರಸ್ಟ್‌ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಕೋರಿ ಬೆಂಗಳೂರು ನಗರ ವಿಶ್ವವಿದ್ಯಾಲಯದ ಕುಲಸಚಿವರು ಹಲಸೂರು ಗೇಟ್‌ ಠಾಣೆಗೆ ದೂರು ಸಲ್ಲಿಸಿದ್ದಾರೆ.

2022–23ನೇ ಶೈಕ್ಷಣಿಕ ಸಾಲಿನಲ್ಲಿ ಹೊಸ ಕಾಲೇಜು ಆರಂಭಕ್ಕೆ ಅನುಮತಿ ಕೋರಿ ಅರ್ಜಿಯ ಜತೆಗೆ ಸಂಸ್ಥೆ ಸಲ್ಲಿಸಿದ್ದ ಕಾಲೇಜಿನ ಕಟ್ಟಡದ ದಾಖಲೆಗಳು ನಕಲಿ ಎಂದು ಸಾಬೀತಾಗಿದೆ. ಕಟ್ಟಡವನ್ನು ಸಂಸ್ಥೆಯ ಹೆಸರಿಗೆ ನೋಂದಣಿ ಮಾಡಿಸದೇ ನಕಲಿ ‘ಲೀಸ್‌ ಡೀಡ್‌‘ ಸಲ್ಲಿಸುವ ಮೂಲಕ ಉನ್ನತ ಶಿಕ್ಷಣ ಇಲಾಖೆ ಹಾಗೂ ವಿಶ್ವವಿದ್ಯಾಲಯವನ್ನು ವಂಚಿಸಲಾಗಿದೆ. ಇದು ಕ್ರಿಮಿನಲ್‌ ಸ್ವರೂಪದ ಅಪರಾಧ. ಹಾಗಾಗಿ, ಸಂಸ್ಥೆಯ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಂಡು, ತನಿಖೆ ನಡೆಸಬೇಕು ಎಂದು ಮನವಿ ಮಾಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.