ಬೆಂಗಳೂರು: ರಾಜ್ಯದಲ್ಲಿ 2017–18ಕ್ಕೂ ಪೂರ್ವದಲ್ಲಿ ನೋಂದಣಿಯಾದ ಖಾಸಗಿ ಹಾಗೂ ಅನುದಾನಿತ ಶಾಲೆಗಳು ಒಂದು ವರ್ಷದ ಒಳಗೆ ಷರತ್ತು ಪೂರೈಸುವ ಪ್ರಮಾಣ ಪತ್ರ ಸಲ್ಲಿಸಿ, ಮಾನ್ಯತೆ ನವೀಕರಣಕ್ಕೆ ಅರ್ಜಿ ಸಲ್ಲಿಸಬೇಕು ಶಾಲಾ ಶಿಕ್ಷಣ ಇಲಾಖೆ ಸೂಚಿಸಿದೆ.
ಈ ಕುರಿತು ಸುತ್ತೋಲೆ ಹೊರಡಿಸಿರುವ ಶಾಲಾ ಶಿಕ್ಷಣ ಇಲಾಖೆ ಆಯುಕ್ತೆ ಬಿ.ಬಿ. ಕಾವೇರಿ, ನ್ಯಾಯಾಲಯದ ಆದೇಶದಂತೆ ಅಗ್ನಿ ಸುರಕ್ಷತಾ ಪ್ರಮಾಣಪತ್ರ, ಶಾಲಾ ಉದ್ದೇಶಕ್ಕಾಗಿ ಜಮೀನಿನ ಭೂ ಪರಿವರ್ತನೆ, ಅನುಮೋದಿತ ಕಟ್ಟಡ ನಕ್ಷೆಗಳು ಸೇರಿದಂತೆ ಅಗತ್ಯ ಪ್ರಮಾಣಪತ್ರಗಳನ್ನು ಸಕ್ಷಮ ಪ್ರಾಧಿಕಾರದಿಂದ ಪಡೆದು, ಒಂದು ವರ್ಷದ ಒಳಗೆ ಸಲ್ಲಿಸಬೇಕು. ಅದಕ್ಕಾಗಿ ₹100ರ ಛಾಪಾ ಕಾಗದಲ್ಲಿ ಮುಚ್ಚಳಿಕೆ ಪತ್ರ ಬರೆದುಕೊಡಬೇಕು. ಅಂತಹ ಶಾಲೆಗಳಿಗಷ್ಟೇ ಮಾನ್ಯತೆ ನೀಡಲಾಗುವುದು ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.