ADVERTISEMENT

ಅತೃಪ್ತ ನಾಲ್ಕು ಶಾಸಕರ ಅನರ್ಹಗೊಳಿಸಲು ವಿಧಾನಸಭಾಧ್ಯಕ್ಷರಿಗೆ‌ ಕಾಂಗ್ರೆಸ್ ದೂರು

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2019, 10:46 IST
Last Updated 11 ಫೆಬ್ರುವರಿ 2019, 10:46 IST
   

ಬೆಂಗಳೂರು:ಅತೃಪ್ತ ನಾಲ್ವರು ಶಾಸಕರನ್ನು ಅನರ್ಹಗೊಳಿಸಲು ವಿಧಾನಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್ ಅವರಿಗೆ‌ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ‌, ಉಪಮುಖ್ಯಮಂತ್ರಿ ಪರಮೇಶ್ವರ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ದೂರು ಸಲ್ಲಿಸಿದರು.

ಕಾಂಗ್ರೆಸ್‌ನ ಶಾಸಕರಾದರಮೇಶ ಜಾರಕಿಹೊಳಿ, ಮಹೇಶ ಕುಮಠಳ್ಳಿ, ಉಮೇಶ ಜಾಧವ, ಬಿ.ನಾಗೇಂದ್ರ ಈ ನಾಲ್ವರ ವಿರುದ್ಧ ದೂರು ನೀಡಲಾಗಿದೆ.

ಸೋಮವಾರ ವಿಧಾನಸಭೆ ಕಲಾಪದ ಮಧ್ಯಾಹ್ನದ ಊಟದ ವಿರಾಮದ ವೇಳೆ ಸಭಾಧ್ಯಕ್ಷರನ್ನು ಭೇಟಿ ಮಾಡಿದ ಕಾಂಗ್ರೆಸ್ ಮುಖಂಡರು ದೂರು ಸಲ್ಲಿಸಿದರು.

ADVERTISEMENT

ವಿಪ್‌ ಮತ್ತು ನೋಟಿಸ್‌ ಎಲ್ಲವನ್ನೂ ಸೇರಿಸಿದ ವಿವರವಾದ ಮಾಹಿತಿಯುಳ್ಳ82 ಪುಟಗಳ ವರದಿಯನ್ನ ಸಲ್ಲಿಸಿದ್ದಾರೆ.

ಎಲ್ಲ ಶಾಸಕರಿಗೂ ಸದನದಲ್ಲಿ ಪಾಲ್ಗೊಳ್ಳುವಂತೆ ವ್ಹಿಪ್ ಜಾರಿ ಮಾಡಲಾಗಿತ್ತು. ಅಧಿವೇಶನ ಮುಗಿಯುವರೆಗೂ ಬರುವುದಿಲ್ಲ ಎಂದು ನಾಲ್ವರು ಪತ್ರದಲ್ಲಿ ತಿಳಿಸಿದ್ದಾರೆ. ನಾಲ್ವರು ಅತೃಪ್ತರ ವಿರುದ್ಧಪಕ್ಷಾಂತರ ನಿಷೇಧ ಕಾಯ್ದೆ ಅನ್ವಯ ಕ್ರಮ ಜರುಗಿಸುವಂತೆ ಸಭಾಧ್ಯಕ್ಷರಿಗೆ ಮನವಿ ಮಾಡುತ್ತೇವೆ. ಇದು ಶಾಸಕಾಂಗ ಪಕ್ಷದ ಸಭೆಯಲ್ಲಿ ಅವಿರೋಧವಾಗಿ ಕೈಗೊಂಡ ನಿರ್ಣಯ. ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯ ನಾಲ್ವರು ಶಾಸಕರನ್ನು ಅನರ್ಹಗೊಳಿಸುವಂತೆ ಸಭಾಧ್ಯಕ್ಷರಿಗೆ ಪ್ರಸ್ತಾವನೆ ಸಲ್ಲಿಸುತ್ತೇವೆ ಎಂದುಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಎರಡು ದಿನಗಳ ಹಿಂದೆ ತಿಳಿಸಿದ್ದರು.

* ಇವನ್ನೂ ಓದಿ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.