ನವದೆಹಲಿ: ಮುಂದಿನ ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಜ್ಜಾಗಲು ಕೆಪಿಸಿಸಿ ಚುನಾವಣಾ ಸಮಿತಿ ರಚಿಸಿ ಎಐಸಿಸಿ ಬುಧವಾರ ರಾತ್ರಿ ಆದೇಶ ಹೊರಡಿಸಿದೆ.
ಕಾಂಗ್ರೆಸ್ ಅದ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ನವದೆಹಲಿಯಲ್ಲಿ ಇತ್ತೀಚೆಗೆ ನಡೆದ ಕರ್ನಾಟಕ ಕಾಂಗ್ರೆಸ್ ನ ಹಿರಿಯ ನಾಯಕರ ಸಭೆಯಲ್ಲಿ ಈ ವಿಷಯದ ಬಗ್ಗೆ ಚರ್ಚೆ ನಡೆದಿತ್ತು. ಒಂದೆರಡು ದಿನಗಳಲ್ಲಿ ಸಮಿತಿ ರಚಿಸಲಾಗುತ್ತದೆ ಎಂದು ಖರ್ಗೆ ತಿಳಿಸಿದ್ದರು.
ಈ ಸಮಿತಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ, ಕೆಪಿಸಿಸಿ ಕಾರ್ಯಾಧ್ಯಕ್ಷರು, ಹಿರಿಯ ನಾಯಕರು ಸೇರಿ 36 ಮಂದಿ ಇದ್ದಾರೆ. ಯುವ ಕಾಂಗ್ರೆಸ್, ಎನ್ಎಸ್ ಯುಐ, ಮಹಿಳಾ ಕಾಂಗ್ರೆಸ್, ಸೇವಾದಳ ಹಾಗೂ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಸಮಿತಿಯಲ್ಲಿ ಇದ್ದಾರೆ.
ಕಾಂಗ್ರೆಸ್ ಟಿಕೆಟ್ ಕೋರಿ ಸಲ್ಲಿಕೆಯಾದ ಅರ್ಜಿಗಳನ್ನು ಈ ಸಮಿತಿ ಪರಿಶೀಲನೆ ಮಾಡಿ ಹೈಕಮಾಂಡ್ ಗೆ ಕಳುಹಿಸಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.