ADVERTISEMENT

ಕಾಂಗ್ರೆಸ್ ಸರ್ಕಾರ ಕೊನೆ ದಿನಗಳನ್ನು ಎಣಿಸುತ್ತಿರುವಂತಿದೆ: ಆರ್. ಅಶೋಕ

​ಪ್ರಜಾವಾಣಿ ವಾರ್ತೆ
Published 20 ಮೇ 2024, 10:03 IST
Last Updated 20 ಮೇ 2024, 10:03 IST
ಆರ್. ಅಶೋಕ
ಆರ್. ಅಶೋಕ   

ಬೆಂಗಳೂರು: 'ಮುಖ್ಯಮಂತ್ರಿಗಳು ಕೊಲೆಗಡುಕರಿಗೆ ಧನ್ಯವಾದ ಹೇಳಿದ್ದಾರಾ? ತಮ್ಮ ಸರಕಾರದ ಅವಧಿ ಮುಗಿದುದಕ್ಕೆ ಬೈಬೈ- ಗುಡ್ ಬೈ ಎಂದು ಧನ್ಯವಾದ ಹೇಳಿದ್ದಾರೋ? ಯಾವುದಕ್ಕೆ ಧನ್ಯವಾದ ಹೇಳಿದ್ದಾರೆ ಎಂಬುದು ಅರ್ಥ ಆಗಿಲ್ಲ’ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ತಿಳಿಸಿದರು.

'ಮುಖ್ಯಮಂತ್ರಿಯವರ ಮುಖದ ಕಳೆ ನೋಡಿದರೆ ಅವರ ಸರ್ಕಾರ ಕೊನೆ ದಿನಗಳನ್ನು ಎಣಿಸುತ್ತಿರುವಂತಿದೆ’ ಎಂದು ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

‘ಕಾಂಗ್ರೆಸ್ ಸರಕಾರದ ಒಂದು ವರ್ಷ ಕೊಲೆಗಡುಕರಿಗೆ ಹರ್ಷ. ಒನ್ ಇಯರ್ ಖಜಾನೆ ಫುಲ್ ಕ್ಲಿಯರ್, ಖಾಲಿ ಖಾಲಿ. ವರುಷ ಒಂದು ಸಮಸ್ಯೆಗಳು ನೂರೊಂದು. ಕಾಂಗ್ರೆಸ್ ಸರಕಾರ ಬಂತು; ಜನರ ಮುಖದಲ್ಲಿ ಹರ್ಷ ಇಲ್ಲ’ ಎಂದು ತಿಳಿಸಿದರು.

ADVERTISEMENT

‘ನೇಹಾ, ಮೀನಾ, ಅಂಜಲಿ ಎಂಬ ಮಹಾಲಕ್ಷ್ಮಿಯರ ಹತ್ಯೆ ಆಯಿತು. ಮುಂದೆ ಯಾರೆಂದು ನಮ್ಮ ಹೆಣ್ಣು ಮಕ್ಕಳು ಆತಂಕಕ್ಕೀಡಾಗಿದ್ದಾರೆ. ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಮೂವರು ಮುಸ್ಲಿಂ ಮಹಿಳೆಯರು ನುಗ್ಗಿ ಮಹಿಳಾ ಸಬ್‌ಇನ್ಸ್‌ಪೆಕ್ಟರ್‌ ಮೇಲೆ ಹಲ್ಲೆ ಮಾಡಿದ್ದಾರೆ. ಸಿದ್ದರಾಮಯ್ಯ ರಾಜ್ಯದಲ್ಲಿ ಮಹಿಳಾ ಪೊಲೀಸರಿಗೆ ರಕ್ಷಣೆ ಇಲ್ಲವಾಗಿದೆ’ ಎಂದು ಅಶೋಕ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.