ಬೆಂಗಳೂರು: ರಾಜರಾಜೇಶ್ವರಿ ನಗರದ ನ್ಯಾಷನಲ್ ಹಿಲ್‌ವ್ಯೂ ಪಬ್ಲಿಕ್ ಶಾಲೆಗೆ ಹುಚ್ವ ವೆಂಕಟ್ ಎಂಬ ವ್ಯಕ್ತಿಯ ಹೆಸರಿನಲ್ಲಿ ಬಾಂಬ್ ಬೆದರಿಕೆ ಪತ್ರ ಬಂದಿದೆ ಎಂದು ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷರೂ ಆಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದರು.
ಈ ಕುರಿತು ಸುದ್ದಿಗಾರರಿಗೆ ಸೋಮವಾರ ಪ್ರತಿಕ್ರಿಯಿಸಿದ ಅವರು, 'ಭಾನುವಾರ ರಾತ್ರಿ ಇ-ಮೇಲ್ ಮೂಲಕ ಬೆದರಿಕೆ ಬಂದಿತ್ತು. ಸೋಮವಾರ ಬೆಳಿಗ್ಗೆ ಶಿಕ್ಷಕರು ಮತ್ತು ಸಿಬ್ಬಂದಿ ಶಾಲೆಗೆ ಬಂದ ಬಳಿಕ ವಿಷಯ ಗೊತ್ತಾಯಿತು. ಅಷ್ಟರಲ್ಲಾಗಲೇ ಮಕ್ಕಳು ಶಾಲೆಗೆ ಬಂದಿದ್ದರು' ಎಂದರು.
ವಿದ್ಯಾರ್ಥಿಗಳನ್ನು ಶಾಲೆಯಿಂದ ಸ್ಥಳಾಂತರ ಮಾಡಲಾಗಿದೆ. ಪೊಲೀಸರು ಶೋಧ ನಡೆಸುತ್ತಿದ್ದಾರೆ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.