ADVERTISEMENT

ವಿಜಯೇಂದ್ರ ಟೀಕೆ ಪಲಾಯನ ವಾದದ ಸಂಕೇತ: ರಮೇಶ ಬಾಬು

​ಪ್ರಜಾವಾಣಿ ವಾರ್ತೆ
Published 2 ಜುಲೈ 2024, 21:48 IST
Last Updated 2 ಜುಲೈ 2024, 21:48 IST
ರಮೇಶ ಬಾಬು
ರಮೇಶ ಬಾಬು   

ಬೆಂಗಳೂರು: ‘ರಾಜ್ಯದಲ್ಲಿ ತಮ್ಮ ಪಕ್ಷದ ಶಾಸಕ ಬಸನಗೌಡ ಪಾಟೀಲ ಯತ್ನಾಳರಂಥ ನಾಯಕರಿಗೆ ಉತ್ತರ ನೀಡಲು ಸಾಧ್ಯವಾಗದೆ ಕದ್ದು ಓಡಾಡುವ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ರಾಹುಲ್ ಗಾಂಧಿಯವರನ್ನು ಟೀಕಿಸಲು ಮುಂದಾಗಿರುವುದು, ಅವರ ಪಲಾಯನ ವಾದದ ಸಂಕೇತ’ ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ರಮೇಶ ಬಾಬು ಅಭಿಪ್ರಾಯಪಟ್ಟಿದ್ದಾರೆ.

‘ವಿಜಯೇಂದ್ರ ಅವರ ನಾಯಕತ್ವದಲ್ಲಿ ಬಿಜೆಪಿಯಲ್ಲಿ ಗುಂಪುಗಾರಿಕೆ ಮಿತಿಮೀರಿದೆ. ಅವರು ಮತ್ತು ವಿರೋಧ ಪಕ್ಷದ ನಾಯಕ ಆರ್. ಅಶೋಕ ತಮ್ಮ ಸ್ಥಾನಗಳನ್ನು ಉಳಿಸಿಕೊಳ್ಳಲು ಪೊಳ್ಳು ಟೀಕೆಗಳನ್ನು ಮಾಡುತ್ತಿದ್ದಾರೆ’ ಎಂದು ದೂರಿದ್ದಾರೆ.

‘ರಾಷ್ಟ್ರಪತಿಯವರ ಭಾಷಣದ ಮೇಲಿನ ವಂದನಾ ನಿರ್ಣಾಯದ ಸಂದರ್ಭದಲ್ಲಿ, ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಅತ್ಯಂತ ಸಮರ್ಥವಾಗಿ ಎಳೆ ಎಳೆಯಾಗಿ ರಾಹುಲ್‌ ಗಾಂಧಿ ಬಿಡಿಸಿಟ್ಟಿದ್ದಾರೆ.  ರಾಹುಲ್ ಗಾಂಧಿ ಅವರು ಸರ್ಕಾರದ ವೈಫಲ್ಯಗಳನ್ನು ಬೆತ್ತಲೆಗೊಳಿಸಿದರೆ, ಉತ್ತರಿಸಲಾಗದ ಮೋದಿ ಸರ್ಕಾರ ಧರ್ಮದ ಹೆಸರಿನಲ್ಲಿ ರಕ್ಷಣೆ ಪಡೆದುಕೊಳ್ಳಲು ಮುಂದಾಗಿದೆ’ ಎಂದೂ ಹೇಳಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.