ಹುಬ್ಬಳ್ಳಿ: ಲೋಕಸಭೆ ಚುನಾವಣೆಯಲ್ಲಿ ತಮ್ಮ ಪುತ್ರನನ್ನ ಸೋಲಿಸಿದ್ದಕ್ಕೆ ಕುಮಾರಸ್ವಾಮಿ,ಸುಮಲತಾ ವಿರುದ್ಧ ರಾಜಕೀಯ ಮಾಡುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಆರ್‌ಎಸ್ ಅಣೆಕಟ್ಟೆ ಬಿರುಕು ಬಿಟ್ಟಿದೆ ಎಂದು ಸುಮಲತಾ ಆರೋಪ ಮಾಡಿದ್ದಾರೆ. ಈ ಬಗ್ಗೆ ಗಣಿ ಇಲಾಖೆಯಾದರೂಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಬೇಕಾಗಿತ್ತು ಎಂದರು.
ಕೆಆರ್‌ಎಸ್‌ನ 20 ಕಿ.ಮೀ ಸುತ್ತಮುತ್ತ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ. ಜೆಡಿಎಸ್ ನಾಯಕರಗಣಿ ಕಂಪನಿಗಳು ಇವೆ ಅಂತಾ ಆರೋಪ ಮಾಡಲಾಗಿದೆ.ಆಡಳಿತ ಪಕ್ಷ ಕೂಡ ಭಾಗಿಯಾಗಿದೆ. ಹೀಗಾಗಿ ಸರ್ಕಾರ ಧ್ವನಿ ಎತ್ತುತ್ತಿಲ್ಲ ಎಂದು ಟೀಕಿಸಿದರು.
ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ.ಸರ್ಕಾರಕ್ಕೆ ಮಾನ, ಮರ್ಯಾದೆ,ನಾಚಿಕೆ ಏನೂ ಇಲ್ಲ. ಮಾಲಿನ್ಯ ಮಂಡಳಿಯ ಅಧಿಕಾರಿ ವರ್ಗಾವಣೆಗೆ ₹ 17 ಕೋಟಿ ಡೀಲಿಂಗ್ ಮಾಡಿದ್ದು ಸುಳ್ಳಾ ಎಂದು ಪ್ರಶ್ನಿಸಿದರು.
ಇವನ್ನೂ ಓದಿ
*ಅಕ್ರಮ ಗಣಿಗಾರಿಕೆ – ಕರಗುತ್ತಿದೆ ಬೆಟ್ಟ, ಏರುತ್ತಿದೆ ದಂಡ!
*ಬೇಬಿಬೆಟ್ಟ: ಗಣಿಗಾರಿಕೆ ಶಾಶ್ವತ ನಿಷೇಧಕ್ಕೆ ಒತ್ತಾಯ
*ಅಕ್ರಮ ಗಣಿಗಾರಿಕೆ ಪರಿಣಾಮ ಕುರಿತ ಪ್ರಜಾವಾಣಿ ವರದಿ ಉಲ್ಲೇಖಿಸಿ ಸುಮಲತಾ ಟ್ವೀಟ್
*ಮಂಡ್ಯ: ‘ನಿಶ್ಶಬ್ದ ಸ್ಫೋಟ’ದಿಂದ ಅಂತರ್ಜಲ ಕಲುಷಿತ
*ಅಕ್ರಮ ಗಣಿಗಾರಿಕೆ: ಸತ್ಯದ ಪರ ನಿಂತಾಗ ಶತ್ರುಗಳು ಹೆಚ್ಚು – ಸುಮಲತಾ ಟ್ವೀಟ್
*‘ಸುಮಲತಾ ಮಾಟಗಾತಿಯಾ?’: ಶಾಸಕ ರವೀಂದ್ರ ಶ್ರೀಕಂಠಯ್ಯ
*ಡ್ಯಾಂ ಬಿರುಕಿನ ಚರ್ಚೆ: ಸುಳ್ಳುಸುದ್ದಿ ಸೃಷ್ಟಿಸಿದ ಗೊಂದಲ
*ಮಂಡ್ಯ: ಕೈಕುಳಿಯಿಂದ ಮೆಗ್ಗರ್ ಸ್ಫೋಟದವರೆಗೆ ಬೇಬಿಬೆಟ್ಟ!
*ಕನ್ನಂಬಾಡಿ ಬಿರುಕು ವಿಚಾರ; ಸಿಎಂ ಸ್ಪಷ್ಟಪಡಿಸಲಿ–ಎಚ್.ವಿಶ್ವನಾಥ್
*ಕುಮಾರಸ್ವಾಮಿ ವಿರುದ್ಧದ ಟೀಕೆ: ರಾಕ್ಲೈನ್ ವೆಂಕಟೇಶ್ ಮನೆಗೆ ಮುತ್ತಿಗೆ
*ನೀವು ಶಾಸಕರೋ, ಭಯೋತ್ಪಾದಕರೋ: ಜೆಡಿಎಸ್ ಶಾಸಕರ ವಿರುದ್ಧ ಸಂಸದೆ ಸುಮಲತಾ ಆಕ್ರೋಶ
*ಬೇಬಿಬೆಟ್ಟ: ನಿತ್ಯ 1,200 ಟ್ರಕ್ ಜಲ್ಲಿ ರವಾನೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.