ಬೆಂಗಳೂರು: ಮೇಕೆದಾಟು ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ಮುಖಂಡರಾದ ಎಚ್.ಎಂ. ರೇವಣ್ಣ ಮತ್ತು ಸಿ.ಎಂ. ಇಬ್ರಾಹಿಂ ಅವರಿಗೆ ಕೋವಿಡ್ ದೃಢಪಟ್ಟಿದೆ.
ಇಬ್ಬರಿಗೂ ಸೋಂಕಿನ ಅಲ್ಪಸ್ವಲ್ಪ ಲಕ್ಷಣಗಳಷ್ಟೆ ಕಾಣಿಸಿಕೊಂಡಿದೆ. ನಗರದ ಖಾಸಗಿ ಆಸ್ಪತ್ರೆಯಲ್ಲಿ ರೇವಣ್ಣ ಚಿಕಿತ್ಸೆ ಪಡೆಯುತ್ತಿದ್ದು, ಸಿ.ಎಂ. ಇಬ್ರಾಹಿಂ ಅವರು ತಮ್ಮ ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿವೆ.
ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದರಿಂದ ರಾಜ್ಯ ಸರ್ಕಾರ ಕೆಲವು ಕಠಿಣ ನಿರ್ಬಂಧಗಳನ್ನು ವಿಧಿಸಿದೆ. ಈ ಮಧ್ಯೆಯೇ, ಮೇಕೆದಾಟು ಯೋಜನೆಯ ತ್ವರಿತ ಅನುಷ್ಠಾನ ಆಗ್ರಹಿಸಿ ಕಾಂಗ್ರೆಸ್ ನಾಯಕರು ಜ. 9ರಿಂದ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಪಾದಯಾತ್ರೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದಾರೆ.
ಸೋಂಕು ಹೆಚ್ಚುತ್ತಿರುವ ಬಗ್ಗೆ ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದ್ದರೂ ಲೆಕ್ಕಿಸದೆ ಕಾಂಗ್ರೆಸ್ ನಾಯಕರು ಪಾದಯಾತ್ರೆ ಮುಂದುವರಿಸಿದ್ದಾರೆ. ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ ಪಾದಯಾತ್ರೆ ನಡೆಸುತ್ತಿರುವ ನಾಯಕರ ವಿರುದ್ಧ ಈಗಾಗಲೇ ಎಫ್ಐಆರ್ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.