ರಾಯಚೂರು: ‘ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವ ಆತ್ಮವಿಶ್ವಾವಿತ್ತು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರು ನೀಡಿರುವ ತೀರ್ಪನ್ನು ಒಪ್ಪುತ್ತೇವೆ. ಕಾಂಗ್ರೆಸ್ ಎಲ್ಲಿ ಎಡವಿದೆ ಎನ್ನುವುದನ್ನು ಪರಿಶೀಲಿಸಲಿದೆ‘ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹೇಳಿದರು.
ಸಿಂಧನೂರಲ್ಲಿ ಮಂಗಳವಾರ ಆಯೋಜಿಸಿದ್ದ ರೈತ ದಸರಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ’ಮತದಾರ ತೀರ್ಪನ್ನು ಎಲ್ಲರೂ ಗೌರವಿಸಬೇಕು‘ ಎಂದರು.
‘ಮುಡಾ ಹಗರಣ ಬಗ್ಗೆ ಚರ್ಚೆ ಮಾಡುವ ಅವಶ್ಯಕತೆ ಇಲ್ಲ. ಮುಡಾ ಹಗರಣಕ್ಕೂ ಮುಖ್ಯಮಂತ್ರಿಗೂ ಸಂಬಂಧ ಇಲ್ಲ. ಕಾನೂನು ಪ್ರಕಾರ ತನಿಖೆ ನಡೆಯುತ್ತಿದೆ‘ ಎಂದು ಹೆಳಿದರು.
‘ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ. ನಾವು ಇರುತ್ತೇವೆ. ನಮ್ಮ ಸರ್ಕಾರವೂ ಇರುತ್ತದೆ‘ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.