ಬೆಂಗಳೂರು: ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಬಿರುಸಾಗಿರುವಆಪರೇಷನ್ ಕಮಲ ಕಾರ್ಯಾಚರಣೆ ವಿಫಲಗೊಳಿಸಲು ಮೈತ್ರಿ ನಾಯಕರು ರಣತಂತ್ರ ಹೆಣೆಯುತ್ತಿದ್ದಾರೆ.ಸಚಿವ ಸಂಪುಟ ಪುನರ್ ರಚನೆ ಮಾಡುವ ಮೂಲಕ ಅತೃಪ್ತ ಶಾಸಕರ ಮನವೊಲಿಕೆಗೆ ಮುಂದಾಗಿದ್ದಾರೆ.
ಕುಮಾರಕೃಪ ಅತಿಥಿ ಗೃಹದಲ್ಲಿಹಿರಿಯ ನಾಯಕರು ಬುಧವಾರ ಸಭೆ ನಡೆಸಿದರು.ರಾಜ್ಯ ಉಸ್ತುವಾರಿ ವೇಣುಗೋಪಾಲ್, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಗೃಹ ಸಚಿವ ಎಂ.ಬಿ. ಪಾಟೀಲ, ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.
‘ಆಪರೇಷನ್ ಕಮಲ’ದ ಸಂಭಾವ್ಯ ಪರಿಣಾಮಗಳು ಮತ್ತು ಅದನ್ನುತಟಸ್ಥಗೊಳಿಸುವುದು ಹೇಗೆಂಬ ಬಗ್ಗೆಯೇ ಚರ್ಚೆ ನಡೆಯಿತು ಎಂದು ತಿಳಿದುಬಂದಿದೆ. ಅತೃಪ್ತರನ್ನು ಪಕ್ಷದಲ್ಲಿ ಉಳಿಸಿಕೊಳ್ಳುವುದು ಹೇಗೆ ಎಂಬ ಬಗ್ಗೆಯೂ ಬಹುಕಾಲ ಚರ್ಚೆ ನಡೆಯಿತು.
ಯಾರಿಗೆಲ್ಲಾ ಸಚಿವ ಸ್ಥಾನ ಕೊಡಬೇಕು. ಯಾರನ್ನು ಸಂಪುಟದಿಂದ ಕೈ ಬಿಡಬೇಕು ಎಂಬುದರ ಬಗ್ಗೆಯೂ ವರಿಷ್ಠರು ಸಮಾಲೋಚನೆ ನಡೆಸಿದರು ಎಂದು ಗೊತ್ತಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.