ಬೆಂಗಳೂರು: ಪಕ್ಷದ ಹೈಕಮಾಂಡ್ ಸೂಚನೆಯಂತೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಅವರು ಮಂಗಳವಾರ ಸಂಜೆ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಅಹವಾಲು ಆಲಿಸಿದರು.
ಹೈಕಮಾಂಡ್ ಸೂಚನೆಯಂತೆ ಪಕ್ಷದ ಕಚೇರಿಗೆ ಭೇಟಿ ನೀಡಿದ ಅವರು ಗೃಹ ಜ್ಯೋತಿ ಯೋಜನೆ ಕುರಿತು ಮಾಹಿತಿ ನೀಡಿದರು. 200 ಯೂನಿಟ್ ವಿದ್ಯುತ್ ಬಳಕೆ ಕುರಿತು ವಿವರಿಸಿದ ಅವರು, ಯಾರೆಲ್ಲಾ ಯೋಜನೆ ವ್ಯಾಪ್ತಿಗೆ ಒಳಪಡುತ್ತಾರೆ ಎಂಬ ಬಗ್ಗೆಯೂ ವಿವರಿಸಿದರು.
ಇದೇ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಕಾಂಗ್ರೆಸ್ ಪಕ್ಷದ ಕಚೇರಿ ನಮಗೆ ದೇವಸ್ಥಾನ ಇದ್ದಂತೆ. ಹೀಗಾಗಿ ಕಚೇರಿಗೆ ಬರುತ್ತೇವೆ’ ಎಂದರು.
‘ಗೃಹಜ್ಯೋತಿ ಯೋಜನೆಗೆ ಎದುರಾಗಿದ್ದ ತಾಂತ್ರಿಕ ಸಮಸ್ಯೆಯನ್ನು ಸರಿಪಡಿಸಿದ್ದೇವೆ. ವೆಬ್‌ಸೈಟ್‌ನ ತಾಂತ್ರಿಕ ಸಮಸ್ಯೆ ಬಗ್ಗೆಯೂ ಗೊತ್ತಾಗಿದೆ. ಸರ್ವರ್ ಸಾಮರ್ಥ್ಯ ಹೆಚ್ಚಿಸಿದ್ದೇವೆ. ಸರ್ವರ್‌ಗೆ ಹತ್ತು ಲಕ್ಷ ಅರ್ಜಿ ಸ್ವೀಕರಿಸುವ ಸಾಮರ್ಥ್ಯ ಇದೆ’ ಎಂದರು.
undefined undefined
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.