ADVERTISEMENT

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ಶಾಸಕ ಬಿ.ನಾಗೇಂದ್ರಗೆ ಷರತ್ತುಬದ್ಧ ಜಾಮೀನು

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2024, 13:37 IST
Last Updated 14 ಅಕ್ಟೋಬರ್ 2024, 13:37 IST
ಬಿ.ನಾಗೇಂದ್ರ 
ಬಿ.ನಾಗೇಂದ್ರ    

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ನಿಧಿ ದುರ್ಬಳಕೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು (ಇ.ಡಿ) ಬಂಧಿಸಿರುವ ಶಾಸಕ ಬಿ. ನಾಗೇಂದ್ರ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

‘ಶಾಸಕ ಬಿ.ನಾಗೇಂದ್ರ, ನಿಗಮದ ನಿಧಿ ಅಕ್ರಮ ವರ್ಗಾವಣೆ ಹಗರಣದ ಸಂಚುಕೋರ. ಅವರ ಆಣತಿಯಂತೆಯೇ ನಿಗಮದ ಹಣವನ್ನು ಅಕ್ರಮವಾಗಿ ಹೈದರಾಬಾದ್‌ನ ಹಲವು ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಲಾಗಿತ್ತು’ಎಂದು ಇ.ಡಿ ನ್ಯಾಯಾಲಯಕ್ಕೆ ಸಲ್ಲಿಸಿದ್ದ ದೂರಿನಲ್ಲಿ ವಿವರಿಸಿತ್ತು. ಅಲ್ಲದೆ, ಇತರೆ 24 ಮಂದಿ ನಾಗೇಂದ್ರಗೆ ಸಾಥ್ ನೀಡಿದ್ದಾರೆ ಎಂದು ಹೇಳಿತ್ತು.

‘ನಿಗಮವು ಬೇರೆ ಬ್ಯಾಂಕ್‌ ಖಾತೆಗಳಲ್ಲಿ ಹೊಂದಿದ್ದ ಠೇವಣಿಗಳನ್ನು ಅನಧಿಕೃತವಾಗಿ ಎಂ.ಜಿ.ರಸ್ತೆಯಲ್ಲಿನ ಬ್ಯಾಂಕ್‌ ಖಾತೆಗೆ ವರ್ಗಾಯಿಸಲಾಗಿದೆ. ಗಂಗಾ ಕಲ್ಯಾಣ ಯೋಜನೆಗೆ ಸಂಬಂಧಿಸಿದ ₹43.33 ಕೋಟಿಯನ್ನು ಖಜಾನೆಯಿಂದ ಅಕ್ರಮವಾಗಿ ವರ್ಗಾಯಿಸಿಕೊಳ್ಳಲಾಗಿದೆ’ ಎಂದು ಆರೋಪಿಸಿತ್ತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.