ADVERTISEMENT

'ಪೇಸಿಎಂ’ ಪ್ರಕರಣ: ಕಾಂಗ್ರೆಸ್ ಕಾರ್ಯಕರ್ತರ ಬಂಧನ ಖಂಡಿಸಿ ಪರಿಷತ್‌ನಲ್ಲಿ ಗದ್ದಲ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2022, 6:56 IST
Last Updated 22 ಸೆಪ್ಟೆಂಬರ್ 2022, 6:56 IST
   

ಬೆಂಗಳೂರು: ಪೇಸಿಎಂ’ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಘಟದ ಇಬ್ಬರು ಕಾರ್ಯಕರ್ತರನ್ನು ಬಂಧಿಸಿರುವುದಕ್ಕೆ ವಿರೋಧ ವ್ಯಕ್ತಪಡಿಸಿ ಕಾಂಗ್ರೆಸ್ ಸದಸ್ಯರು ವಿಧಾನ ಪರಿಷತ್ ನಲ್ಲಿ ಗುರುವಾರ ಸಭಾಪತಿ ಪೀಠದ ಮುಂದೆ ಧರಣಿ ನಡೆಸಿದರು.

ಶೇ 40ರ ಸರ್ಕಾರ ಎನ್ನುವ ಮಾಸ್ಕ್‌ಗಳನ್ನು ಧರಿಸಿದ್ದಸದಸ್ಯರು, ಸರ್ಕಾರದ ವಿರುದ್ಧ ಘೋಷಣೆ ಹಾಕಿದರು.

‘ಸರ್ಕಾರ ಏಕಪಕ್ಷೀಯವಾಗಿ ನಡೆದುಕೊಂಡಿದೆ. ಬಿಜೆಪಿಯವರು ಸಹ ಕಾಂಗ್ರೆಸ್ ನಾಯಕ ಪೋಸ್ಟರ್ ಗಳನ್ನು ಅಂಟಿಸಿದ್ದರು. ಆದರೆ ಯಾರನ್ನು ಬಂಧಿಸಿಲ್ಲ. ಗೃಹ ಸಚಿವರು ರಾಜೀನಾಮೆ ನೀಡಬೇಕು’ ಎಂದು ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಒತ್ತಾಯಿಸಿದರು.

ADVERTISEMENT

ಬಿಜೆಪಿ ಸದಸ್ಯರು ಧರಣಿಗೆ ಆಕ್ಷೇಪ ವ್ಯಕ್ತಪಡಿಸಿದ ಕಾಂಗ್ರೆಸ್ ಸದಸ್ಯರು ಬಿಜೆಪಿಯವರು ಹೇಡಿಗಳು ಎಂದು ಟೀಕಿಸಿದರು.

ಇದರಿಂದ ಗದ್ದಲ ಉಂಟಾಗಿದ್ದರಿಂದ ಸಭಾಪತಿ ರಘುನಾಥ ರಾವ್ ಮಲ್ಕಾಪುರೆ ಅವರು ಸದನದ ಕಲಾಪವನ್ನು 10 ನಿಮಿಷಗಳ ಮುಂದೂಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.