ADVERTISEMENT

ಪಿಎಂ ಕೇರ್ ಫಂಡ್ ಹಗರಣದ ಬಗ್ಗೆ ಬಿಜೆಪಿ ನಾಯಕರು ತುಟಿ ಬಿಚ್ಚುವುದಿಲ್ಲ: ಕಾಂಗ್ರೆಸ್

​ಪ್ರಜಾವಾಣಿ ವಾರ್ತೆ
Published 14 ಜೂನ್ 2022, 13:30 IST
Last Updated 14 ಜೂನ್ 2022, 13:30 IST
   

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ)ರಾಹುಲ್‌ ಗಾಂಧಿ ಅವರನ್ನು ವಿಚಾರಣೆಗೆ ಒಳಪಡಿಸಿರುವುದಕ್ಕೆ ಕಾಂಗ್ರೆಸ್‌ ಕಿಡಿಕಾರಿದೆ.

ಈಗಾಗಲೇಮುಗಿದಿರುವ ಪ್ರಕರಣವನ್ನು ಮತ್ತೆ ಮುನ್ನೆಲೆಗೆ ತರಲಾಗಿದೆ ಎಂದು ಆರೋಪಿಸಿರುವ 'ಕರ್ನಾಟಕಕಾಂಗ್ರೆಸ್‌' ಟ್ವಿಟರ್‌ ಮೂಲಕ ಗುಡುಗಿದೆ.

'ಮುಗಿದಿರುವ ನ್ಯಾಷನಲ್ ಹೆರಾಲ್ಡ್ ಪ್ರಕರಣವನ್ನು ಮುನ್ನೆಲೆಗೆ ತಂದು ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಹೊರಟಿರುವ ಬಿಜೆಪಿ,ಈ ದಶಕದ ಅತಿದೊಡ್ಡ ಹಗರಣ ಪಿಎಂ ಕೇರ್ ಫಂಡ್ ಬಗ್ಗೆ ಯಾಕೆ ತುಟಿ ಬಿಚ್ಚುವುದಿಲ್ಲ? ಜಾರಿ ನಿರ್ದೇಶನಾಲಯದ ನೋಟಿಸ್ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಶಾ ಅವರಿಗೆಯಾವಾಗ ತಲುಪಲಿದೆ? ಜನರ ಹಣದ ಸರಿಯಾದ ಲೆಕ್ಕ ಯಾವಾಗ ಬಹಿರಂಗ ಪಡಿಸುತ್ತೀರಿ?' ಎಂದು ಟ್ವೀಟ್‌ ಮಾಡಿದೆ.

ADVERTISEMENT

ನ್ಯಾಷನಲ್ ಹೆರಾಲ್ಡ್ಪ್ರಕರಣ ಸಂಬಂಧ ಇ.ಡಿ ಅಧಿಕಾರಿಗಳು ರಾಹುಲ್‌ ಅವರನ್ನು ಸೋಮವಾರಹತ್ತು ಗಂಟೆಗೂ ಹೆಚ್ಚು ಸಮಯವಿಚಾರಣೆ ನಡೆಸಿದ್ದರು. ಮಂಗಳವಾರವೂವಿಚಾರಣೆ ಮುಂದುವರಿದಿದೆ.

ಇದನ್ನು ವಿರೋಧಿಸಿ ಕಾಂಗ್ರೆಸ್‌ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ದೆಹಲಿಯಲ್ಲಿರುವ ಪಕ್ಷದ ಪ್ರಧಾನ ಕಚೇರಿಗೆ ತೆರಳಿದ್ದ ರಣದೀಪ್ ಸುರ್ಜೇವಾಲಾ ಸೇರಿದಂತೆ ಹಲವರನ್ನು ವಶಕ್ಕೆ ಪಡೆಯಲಾಗಿದೆ.ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಸಂಸದ ಡಿ.ಕೆ. ಸುರೇಶ್, ದಿನೇಶ್ ಗುಂಡೂರಾವ್ ಸೇರಿದಂತೆ ರಾಜ್ಯದ ಹಲವು ನಾಯಕರೂ ಪೊಲೀಸರ ವಶದಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.