ADVERTISEMENT

ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ನಿಂದ ಪ್ರಬಲ ಅಭ್ಯರ್ಥಿ ಕಣಕ್ಕೆ: ಡಿ.ಕೆ. ಶಿವಕುಮಾರ್‌

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2024, 14:33 IST
Last Updated 22 ಅಕ್ಟೋಬರ್ 2024, 14:33 IST
<div class="paragraphs"><p>ಡಿ.ಕೆ. ಶಿವಕುಮಾರ್‌</p></div>

ಡಿ.ಕೆ. ಶಿವಕುಮಾರ್‌

   

ಮೈಸೂರು: ‘ಉಪಚುನಾವಣೆ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ಅಂತಿಮ ಹಂತಕ್ಕೆ ಬಂದಿದ್ದು, ಶೀಘ್ರದಲ್ಲೇ ಪ್ರಕಟಿಸುತ್ತೇವೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ನಿಂದ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದ್ದು, ಗೆಲ್ಲುತ್ತೇವೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.

ನಗರದಲ್ಲಿ ಮಂಗಳವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ‘ರಾಜಕಾರಣದಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ನವರು ಹೇಗೆ ಲೆಕ್ಕಾಚಾರ ಹಾಕುತ್ತಿದ್ದಾರೋ ಅದೇ ರೀತಿ ನಾವು ಲೆಕ್ಕಚಾರ ಹಾಕಿ ತೀರ್ಮಾನ ಮಾಡುತ್ತೇವೆ. ಗೆಲ್ಲುವ ಅಭ್ಯರ್ಥಿಯನ್ನೇ ಆಯ್ಕೆ ಮಾಡುತ್ತೇವೆ’ ಎಂದರು.

ADVERTISEMENT

ಚನ್ನಪಟ್ಟಣ ಅಭ್ಯರ್ಥಿ ಕುರಿತು ಪ್ರತಿಕ್ರಿಯಿಸಿ ‘ನಾನೇ ಅಭ್ಯರ್ಥಿ ಎಂದು ಹೇಳಿದ್ದೇನೆ. ಪಕ್ಷದ ಚಿಹ್ನೆ ಮೇಲೆಯೇ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ. ಯೋಗೇಶ್ವರ್ ಸೇರಿದಂತೆ ಯಾರ ಜೊತೆಗೂ ನಾನು ಮಾತುಕತೆ ನಡೆಸಿಲ್ಲ’ ಎಂದರು.

‘ಈಗಾಗಲೇ ಎಐಸಿಸಿ ಪ್ರಧಾನ ಕಾರ್ಯದರ್ಶಿ, ಮುಖ್ಯಮಂತ್ರಿ ಹಾಗೂ ನಾನು ಕುಳಿತು ಚರ್ಚೆ ಮಾಡಿದ್ದೇವೆ. ಖರ್ಗೆ ಅವರಿಂದ ಅನುಮತಿ ಪಡೆದು ಬಿ ಫಾರಂಗೆ ನಾನೇ ಸಹಿ ಹಾಕಿ ಕೊಡುತ್ತೇನೆ’ ಎಂದು ಹೇಳಿದರು.

‘ಚನ್ನಪಟ್ಟಣ ಅಭ್ಯರ್ಥಿ ಶೀಘ್ರ ನಿರ್ಧಾರ’

ಮೈಸೂರು: ‘ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಅಭ್ಯರ್ಥಿಯಾಗಿ ಸಂಸದ ತುಕಾರಾಂ ಅವರ ಪತ್ನಿಯನ್ನು ಕಣಕ್ಕಿಳಿಸಲಾಗುವುದು. ಶಿಗ್ಗಾಂವಿ, ಚನ್ನಪಟ್ಟಣ ಅಭ್ಯರ್ಥಿ ಯಾರೆಂಬುದನ್ನು ನಿರ್ಧರಿಸಬೇಕಷ್ಟೇ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನಗರದ ತಮ್ಮ ನಿವಾಸದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಚನ್ನಪಟ್ಟಣ ಕ್ಷೇತ್ರಕ್ಕೆ ಡಿ.ಕೆ.ಸುರೇಶ್ ಹೆಸರು ಕೂಡ ಇದೆ. ಪಕ್ಷದ ಅಧ್ಯಕ್ಷರೇ ಅಲ್ಲಿರುವುದರಿಂದ ಅವರೇ ಸೂಕ್ತ ಅಭ್ಯರ್ಥಿಯನ್ನು ತೀರ್ಮಾನಿಸುತ್ತಾರೆ. ಒಳ್ಳೆಯ ಅಭ್ಯರ್ಥಿ ಹಾಕಬೇಕೆಂದು ನಾನೂ ಹೇಳಿದ್ದೇನೆ' ಎಂದರು.

‌‘ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರುತ್ತಾರೆಯೇ’ ಎಂಬ ಪ್ರಶ್ನೆಗೆ ಉತ್ತರಿಸಿ, ‘ಪಕ್ಷದ ಸಿದ್ಧಾಂತ ಹಾಗೂ ಸಂವಿಧಾನದ ಮೌಲ್ಯಗಳನ್ನು ಒಪ್ಪಿ ಯಾರೇ ಬಂದರೂ ಸ್ವಾಗತ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.