ಬೆಂಗಳೂರು: ಭೂಕಬಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಖುದ್ದು ಹಾಜರಾಗುವಂತೆ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಅವರ ಪತ್ನಿ ಮಹೇಶ್ ಶೆಟ್ಟಿ ಅವರಿಗೆ ಹೈಕೋರ್ಟ್ ಆದೇಶಿಸಿದೆ.
ಉಜಿರೆಯ ಜಯಪ್ರಕಾಶ್ ಶೆಟ್ಟಿ ದಾಖಲಿಸಿರುವ ಸಿವಿಲ್ ನ್ಯಾಯಾಂಗ ನಿಂದನೆ ಮೊಕದ್ದಮೆಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಸೋಮಶೇಖರ್ ನೇತೃತ್ವದ ವಿಭಾಗೀಯ ನ್ಯಾಯಪೀಠವು ಈ ಕುರಿತಂತೆ ಆದೇಶಿಸಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ಹಾಜರಿದ್ದ ಹಿರಿಯ ವಕೀಲ ಚಂದ್ರಶೇಖರ ಅರಿಗ ಅವರು, ‘ಪ್ರತಿವಾದಿಗಳಾದ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಇತರರು 2019ರ ಜುಲೈ18ರಂದು ರಿಟ್ ಅರ್ಜಿಯೊಂದರಲ್ಲಿ ಹೈಕೋರ್ಟ್‌ನ ಏಕಸದಸ್ಯ ನ್ಯಾಯಪೀಠ ನೀಡಿರುವ ಆದೇಶವನ್ನು ಉಲ್ಲಂಘಿಸಿದ್ದಾರೆ’ ಎಂಬ ಅಂಶವನ್ನು ನ್ಯಾಯಪೀಠದ ಗಮನಕ್ಕೆ ತಂದರು. ಇದನ್ನು ಪರಿಗಣಿಸಿದ ನ್ಯಾಯಪೀಠವು ಪ್ರತಿವಾದಿಗಳು ಖುದ್ದು ಹಾಜರಾಗುವಂತೆ ಆದೇಶಿಸಿ ವಿಚಾರಣೆಯನ್ನು ಇದೇ 29ಕ್ಕೆ ಮುಂದೂಡಿತು.
ನ್ಯಾಯಾಂಗ ನಿಂದನೆ ಹಾಗೂ ನ್ಯಾಯಾಧೀಶರನ್ನು ಸಾರ್ವಜನಿಕವಾಗಿ ನಿಂದಿಸಿದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಬೇಷರತ್ತಾಗಿ ಮಹೇಶ್ ಶೆಟ್ಟಿ ಈ ಹಿಂದೆ ಕೋರ್ಟ್‌ನಲ್ಲಿ ಬೇಷರತ್ತಾಗಿ ಕ್ಷಮೆ ಯಾಚಿಸಿದ್ದರು. ಈ ಸಂಬಂಧ ಸಲ್ಲಿಸಿದ್ದ ಪ್ರಮಾಣ ಪತ್ರವನ್ನು ಪುರಸ್ಕರಿಸಿದ್ದ ನ್ಯಾಯಾಲಯ ಮಹೇಶ್ ಶೆಟ್ಟಿ ವಿರುದ್ಧ ದಾಖಲಾಗಿದ್ದ, ನ್ಯಾಯಾಧೀಶರನ್ನು ನಿಂದಿಸಿದ ಪ್ರಕರಣವನ್ನು ಮುಕ್ತಾಯಗೊಳಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.