ನವದೆಹಲಿ: ಕರ್ನಾಟಕದಲ್ಲಿ ಉಂಡೆ ಕೊಬ್ಬರಿ ಮಾರಾಟ ಮಾಡಿರುವ ರೈತರಿಗೆ ಪಾವತಿ ಮಾಡಲು ₹691 ಕೋಟಿ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ರೈಲ್ವೆ ಹಾಗೂ ಜಲಶಕ್ತಿ ಖಾತೆಯ ರಾಜ್ಯ ಸಚಿವ ವಿ. ಸೋಮಣ್ಣ ಅವರು, ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.
‘ತುಮಕೂರು, ಮಂಡ್ಯ, ಹಾಸನ, ಮೈಸೂರು, ಚಾಮರಾಜನಗರ, ಚಿತ್ರದುರ್ಗ, ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೆಂಗು ಬೆಳೆಯುವ ರೈತರ ಹಿತಾಸಕ್ತಿ ಕಾಪಾಡಲು ಇದರಿಂದ ಅನುಕೂಲವಾಗುತ್ತದೆ’ ಎಂದು ಸೋಮಣ್ಣ ಅವರು ಸಚಿವರ ಗಮನಕ್ಕೆ ತಂದರು.
ರಾಜ್ಯದಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ (ಎಂಎಸ್‌ಪಿ) ಮತ್ತೆ 7,500 ಟನ್ ಮಿಲ್ಲಿಂಗ್ ಕೊಬ್ಬರಿ (ಚಿಕ್ಕ ಚಿಕ್ಕ ತುಂಡು) ಖರೀದಿಸಲು ಕೇಂದ್ರ ಸರ್ಕಾರ ಈಚೆಗೆ ಒಪ್ಪಿಗೆ ನೀಡಿತ್ತು.
‘ತುಮಕೂರು ಜಿಲ್ಲೆಯಲ್ಲಿ ಉಂಡೆ ಕೊಬ್ಬರಿ ಮಾರಾಟ ಮಾಡಿದ ರೈತರಿಗೆ ಕಳೆದ ವಾರ ₹346 ಕೋಟಿ ಪಾವತಿ ಮಾಡಲಾಗಿದೆ. ₹691 ಕೋಟಿ ಬಿಡುಗಡೆ ಮಾಡುವುದಾಗಿ ಕೃಷಿ ಸಚಿವರು ಭರವಸೆ ನೀಡಿದ್ದಾರೆ. ಹಾಗಾಗಿ, ರೈತರ ಹಣವನ್ನು ಶೀಘ್ರ ಪಾವತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಸೋಮಣ್ಣ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.