ಬೆಂಗಳೂರು: ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಈಗ ಪೂರ್ಣ ಗುಣಮುಖರಾಗಿದ್ದಾರೆ.
ಎರಡನೇ ಬಾರಿ ನಡೆಸಿದ ಗಂಟಲು ದ್ರವ ಹಾಗೂ ರಕ್ತ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಕಳೆದ ಮಂಗಳವಾರ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಆರಂಭದ ಎರಡು ದಿನ ಮಾತ್ರ ಜ್ವರ ಕಾಣಿಸಿಕೊಂಡಿಸಿತ್ತು. ಉಳಿದಂತೆ ಸೋಂಕಿನ ಲಕ್ಷಣ ಇರಲಿಲ್ಲ.
ಸಿದ್ದರಾಮಯ್ಯ ಅವರು ನಾಳೆ ಆಸ್ಪತ್ರೆಯಿಂದ ಬಿಡುಗಡೆ ಆಗಲಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.